ಕೃಷಿ ಕಾಯ್ದೆ ಹಿಂಪಡೆಯದಿದ್ಧರೆ ಡಿ.20 ರಂದು ಬಾರ್ ಕೋಲ್ ಚಳುವಳಿ- ರಾಜ್ಯ ಸರ್ಕಾರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ.

Promotion

ಬೆಳಗಾವಿ,ಡಿಸೆಂಬರ್,13,2021(www.justkannada.in): ಕೃಷಿ ಕಾಯ್ದೆ ಹಿಂಪಡೆಯದಿದ್ಧರೆ ಡಿ.20 ರಂದು ಬಾರ್ ಕೋಲ್ ಚಳುವಳಿ ನಡೆಸಲಾಗುತ್ತದೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರ ಶೇಖರ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಮೂರು ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರ ಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸ್ಥಳಕ್ಕೆ ಸಚಿವ ಬಿಸಿ ಪಾಟೀಲ್ ಆಗಮಿಸಿ ಮನವಿ ಸ್ವೀಕರಿಸಿದರು.

ಬಳಿಕ ಮಾತನಾಡಿದ ರೈತಮುಖಂಡ ಕೋಡಿಹಳ್ಳಿ ಚಂದ್ರಶೇಖರ್, ಡಿಸೆಂಬರ್ 20ಕ್ಕೆ ರೈತರ ಪ್ರತಿಭಟನೆ ಮುಂದೂಡಿಕೆ ಮುಂದೂಡಿಕೆ ಮಾಡುತ್ತೇವೆ.   ರೈತರ ಬೇಡಿಕೆ ಈಡೇರಿಕೆಗೆ ಗಡುವು ನೀಡುತ್ತೇವೆ. ಸದನದಲ್ಲಿ ಚರ್ಚಿಸಿ ಕಾಯ್ದೆ ವಾಪಸ್ ಪಡೆಯಬೇಕು. ಇಲ್ಲದಿದ್ರೆ ಬಾರುಗೋಲು ಚಳುವಳಿ ನಡೆಸುತ್ತೇವೆ ಎಂದರು.

ಸರ್ಕಾರಕ್ಕೆ ಒಂದು ವಾರಗಳ ಗಡುವು ನೀಡೋಣ 3 ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯಬೇಕು. ಇಲ್ಲದಿದ್ರೆ ಡಿ.20 ರಂದು ಬಾರ್ ಕೋಲ್ ಚಳುವಳಿ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದರು.

Key words: Bargolu- Movement – Agriculture Act – not repealed- Kodihalli Chandrasekhar-warns- state government