ದೆಹಲಿಯಲ್ಲಿ ರೈತರ ಹೋರಾಟಕ್ಕೆ 4 ತಿಂಗಳು: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಭಾರತ್ ಬಂದ್…

Promotion

ನವದೆಹಲಿ,ಮಾರ್ಚ್,26,2021(www.justkannada.in): ಕೇಂದ್ರ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನವದೆಹಲಿಯಲ್ಲಿ ವಿವಿಧ ರಾಜ್ಯಗಳ ರೈತರು ನಡೆಸುತ್ತಿರುವ ಹೋರಾಟ ಇಂದಿಗೆ 4 ತಿಂಗಳು ಪೂರೈಸಲಿದೆ. ಈ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಇಂದು ಭಾರತ್ ಬಂದ್’ಗೆ ಕರೆ ಕೊಟ್ಟಿವೆ.
ವಿವಿಧ ರಾಜ್ಯಗಳಲ್ಲಿ ಭಾರತ್ ಬಂದ್ ಗೆ ಬೆಂಬಲ ವ್ಯಕ್ತವಾಗಿದ್ದು ಅಯಾ ರಾಜ್ಯಗಳ ರೈತರು ಧರಣಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಭಾರತ್ ಬಂದ್ ಹಿನ್ನೆಲೆ ಘಾಜಿಪುರ ಗಡಿ ರಾಷ್ಟ್ರೀಯ ಹೆದ್ದಾರಿ 24ರನ್ನು ಬಂದ್ ಮಾಡಲಾಗಿದೆ. ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಜನರು ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಪಾಲನೆ ಮಾಡಬೇಕಿದ್ದು, ಮಾಸ್ಕ್, ಸ್ವಚ್ಛತೆ ಹಾಗೂ ಸಾಮಾಜಿಕ ಅಂತರ ಪಾಲನೆ ಮಾಡಬೇಕೆಂದು ದೆಹಲಿ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.4 months Farmer-struggle-Bharat Bandh

ಸಾಮಾನ್ಯ ಜನ ಜೀವನದ ಮೇಲೆ ಪರಿಣಾಮ ಬೀರದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಇನ್ನು ಕರ್ನಾಟಕದಲ್ಲಿ ಬಂದ್ ಗೆ ಬೆಂಬಲಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಲಿದ್ದಾರೆ.
Key words: 4 months Farmer-struggle-Bharat Bandh