ದೇಶದಲ್ಲಿ ಕೊರೋನಾ ಹೆಚ್ಚಳ: ಒಂದೇ ದಿನದಲ್ಲಿ 1.41 ಲಕ್ಷ ಮಂದಿಗೆ ಕೋವಿಡ್ ಸೋಂಕು ದೃಢ.

Promotion

ನವದೆಹಲಿ,ಜನವರಿ,8,2022(www.justkannada.in):  ದೇಶದಲ್ಲಿ  ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಿದ್ದು. ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಹೊಸದಾಗಿ 1,41,986 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ.

ಈ ಕುರಿತು ಕೇಂಧ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 285  ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ  ಕೊರೊನಾ ಸೋಂಕಿಗೆ ಮೃತಪಟ್ಟವರ ಸಂಖ್ಯೆ 4,83,463ಕ್ಕೆ ಏರಿಕೆಯಾಗಿದೆ.

file photo

ಇನ್ನು ದೇಶದಲ್ಲಿ 4,72,169 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 40,895 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 3,44,12,740 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದಿನದ ಕೋವಿಡ್ ಪಾಸಿಟಿವ್ ರೇಟ್ ಶೇ.9.28ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,50,61,92,903 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. ಇನ್ನು ದೇಶದಲ್ಲಿ  ಒಮಿಕ್ರಾನ್ ಸೋಂಕಿತರ ಸಂಖ್ಯೆ 3071ಕ್ಕೆ ಏರಿಕೆಯಾಗಿದೆ.  1203 ಮಂದಿ ಒಮಿಕ್ರಾನ್ ಸೋಂಕಿತರು ಗುಣಮುಖರಾಗಿದ್ದಾರೆ.

Key words: Corona -increase – country-1.41 lakh -people