ದ.ಕನ್ನಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಾಲಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಜಯಭೇರಿ.

Promotion

ದಕ್ಷಿಣ ಕನ್ನಡ,ಡಿಸೆಂಬರ್,14,2021(www.justkannada.in):  ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳನ್ನ ಒಳಗೊಂಡಿರುವ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಅವರು 3672 ಮತಗಳನ್ನ ಪಡೆದು ಗೆಲುವು ಸಾಧಿಸುವ ಮೂಲಕ 3ನೇ ಬಾರಿಗೆ ವಿಧಾನ ಪರಿಷತ್ ಪ್ರವೇಶಿಸಿದ್ದಾರೆ.  ಕಾಂಗ್ರೆಸ್ ನ ಮಂಜುನಾಥ್ ಭಂಡಾರಿ 2079 ಮತಗಳನ್ನ ಪಡೆದು ದ್ವಿತೀಯ ಪ್ರಾಶಸ್ತ್ಯದ ಮತಗಳನ್ನ ಪಡೆದಿದ್ದಾರೆ. ಎಸ್ ಡಿಪಿಐನ ಶಾಫಿ ಬೆಳ್ಳಾರೆ 204 ಮತಗಳನ್ನ ಪಡೆದು ಸೋಲನುಭವಿಸಿದ್ದಾರೆ.

ಧಾರವಾಡದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ರಾಯಚೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಗೌಡ ಬಯ್ಯಪುರ ಗೆಲುವು ಸಾಧಿಸಿದ್ದಾರೆ.

Key words: BJP candidate- Kota Srinivas Poojary –dakshina Kannada- constituency