ನಟ ಪುನೀತ್ ರಾಜ್ ಕುಮಾರ್ ನಿಧನ ಹಿನ್ನೆಲೆ: ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ.

Promotion

ಬೆಂಗಳೂರು ಅಕ್ಟೋಬರ್,29,2021(www.justkannada.in):  ನಟ ಪುನೀತ್ ರಾಜ್‌ಕುಮಾರ್ ನಿಧನ ಹಿನ್ನೆಲೆ  ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಈ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್  ಆದೇಶ ಹೊರಡಿಸಲಾಗಿದ್ದು,  ಅಕ್ಟೋಬರ್  29ರಿಂದ ಅ.31ರ ರಾತ್ರಿ 12 ಗಂಟೆಯವರೆಗೆ ಮೂರು ದಿನಗಳ ಕಾಲ ಎಲ್ಲಾ ಬಾರ್ ಹಾಗೂ ರೆಸ್ಟೋರೆಂಟ್, ಮದ್ಯದಂಗಡಿ ಹಾಗೂ ಇತರೆಡೆ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಯಾರಾದರೂ ಮದ್ಯ ಮಾರಾಟಕ್ಕೆ ಯತ್ನಿಸಿದರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಆದೇಶದಲ್ಲಿ  ತಿಳಿಸಲಾಗಿದೆ.

ಆಸ್ಪತ್ರೆಗಳು, ಸದಾಶಿವನಗರದಲ್ಲಿರುವ ನಟನ ಮನೆ ಹಾಗೂ ವಿವಿಧ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

Key words: death – actor -Puneet Raj Kumar-Ban -liquor -sale – Bengaluru