ನಾಳೆಯಿಂದ ಮಳೆ ಹಾನಿ ಪ್ರದೇಶಗಳಿಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಭೇಟಿ.

Promotion

ಬೆಂಗಳೂರು,ನವೆಂಬರ್,23,2021(www.justkannada.in):  ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಧಾರಾಕಾರ ಮಳೆಗೆ ಹಲವು ಜಿಲ್ಲೆಗಳ ಜನರು ತತ್ತರಿಸಿ ಹೋಗಿದ್ದು, ಮಳೆಯಿಂದಾಗಿ ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಮನೆ ಕುಸಿತ ಬೆಳೆ ಹಾನಿಯಿಂದಾಗಿ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ ನಾಳೆಯಿಂದ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳಲಿದ್ದಾರೆ. ನಾಳೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಭೇಟಿ ನೀಡಲಿರುವ ಸಿದ್ಧರಾಮಯ್ಯ ಮಳೆಹಾನಿ ಪ್ರದೇಶಗಳ ಜನರ ಸಮಸ್ಯೆ ಆಲಿಸಲಿದ್ದಾರೆ.

ಅಧಿವೇಶನಕ್ಕೂ ಮೊದಲು ಮಾಜಿ ಸಿಎಂ ಸಿದ್ಧರಾಮಯ್ಯ ಈ ಪ್ರವಾಸ ಕೈಗೊಂಡಿದ್ದು ಈ ಮೂಲಕ ಸರ್ಕಾರದ ಗಮನ ಸೆಳೆಯಲು ಮುಂದಾಗಿದ್ದಾರೆ.  ಇತ್ತ ಸಿಎಂ ಬಸವರಾಜ ಬೊಮ್ಮಾಯಿ ಸಹ ನಿನ್ನೆ ಕೋಲಾರದ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದರು. ನಂತರ ಇಂದು ಬೆಂಗಳೂರು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆ ಹಾಲಿಸಿದ್ದರು.

Key words: Opposition leader -Siddaramaiah –visits- rain-affected -areas -tomorrow