ಪರಿಷತ್ ಚುನಾವಣೆ ಫಲಿತಾಂಶವೇ ಕಾಂಗ್ರೆಸ್ ತಕ್ಕ ಉತ್ತರ ನೀಡುತ್ತೆ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.

Promotion

ಶಿವಮೊಗ್ಗ,ಡಿಸೆಂಬರ್,10,2021(www.justkannada.in):  ವಿಧಾನ ಪರಿಷತ್ ಚುನಾವಣೆಯ ಫಲಿತಾಂಶವೇ ಕಾಂಗ್ರೆಸ್ ನವರಿಗೆ ಉತ್ತರ ನೀಡುತ್ತದೆ. ಬಿಜೆಪಿ ಕನಿಷ್ಠ 15 ಸ್ಥಾನಗಳಲ್ಲಾದರೂ ಗೆಲ್ಲುತ್ತದೆ ಎಂದು  ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ  ತಿಳಿಸಿದರು.

ಶಿವಮೊಗ್ಗದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ,  ಈ ಬಾರಿ ಬಿಜೆಪಿಗೆ ಎಲ್ಲ ಕಡೆ ಬೆಂಬಲ ವ್ಯಕ್ತವಾಗುತ್ತಿದೆ. 25 ಸ್ಥಾನಗಳಲ್ಲಿ 20 ಸ್ಥಾನಕ್ಕೆ ಬಿಜೆಪಿ ಸ್ಪರ್ಧಿಸಿದ್ದು, 15 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ ಎಂದರು.

ಹಾಗೆಯೇ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿರುವ ಡಿ.ಎಸ್. ಅರುಣ್ ಅವರು ಸುಮಾರು 400 ಕ್ಕೂ ಹೆಚ್ಚು ಮತಗಳಿಂದ ಗೆಲ್ಲಲಿದ್ದಾರೆ. ಈ ಬಗ್ಗೆ ಯಾವ ಅನುಮಾನಗಳು ಬೇಡ. ಬಿಜೆಪಿ ಶಾಸಕರು ಸೇರಿದಂತೆ ಮುಖಂಡರು, ಕಾರ್ಯಕರ್ತರು ಹಗಲಿರುಳು ಶ್ರಮಿಸಿದ್ದಾರೆ. ಅವರ ಶ್ರಮ ವ್ಯರ್ಥವಾಗುವುದಿಲ್ಲ. ಮುಖ್ಯವಾಗಿ ಗ್ರಾಮೀಣ ಪ್ರದೇಶದಲ್ಲಿ ಬಿಜೆಪಿಯ ಅಲೆ ಇದ್ದು, ಈ ಬಾರಿ ನಾವು ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ತಮ್ಮ ಪುತ್ರ ವಿಜಯೇಂದ್ರ ಅವರಿಗೆ ಯಾವುದೇ ಸ್ಥಾನ ಮಾನ ನೀಡುವುಂತೆ ನಾನು ಬೇಡಿಕೆ ಇಟ್ಟಿಲ್ಲ ಎಂದು ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದರು.

Key words: Congress- answer -result – election-Former CM- BS Yeddyurappa.