ಬಿಜೆಪಿ ಅಭ್ಯರ್ಥಿ ರಘು ಕೌಟಿಲ್ಯ ವಿರುದ್ಧ ನಾವು ಕೂಡ ಆಕ್ಷೇಪಣೆ ಸಲ್ಲಿಸುತ್ತೇವೆ- ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್.

Promotion

ಮೈಸೂರು,ನವೆಂಬರ್,25,2021(www.justkannada.in):  ಲಾಭದಾಯಕ ಹುದ್ದೆಯಲ್ಲಿದ್ದುಕೊಂಡು ಚುನಾವಣೆಗೆ ಸ್ಪರ್ಧಿಸಲು ಅವಕಾಶವಿಲ್ಲ. ಹೀಗಾಗಿ ಬಿಜೆಪಿ ಅಭ್ಯರ್ಥಿ ರಘು ಕೌಟಿಲ್ಯ ವಿರುದ್ಧ ನಾವು ಆಕ್ಷೇಪಣೆ ಸಲ್ಲಿಸುತ್ತೇವೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ತಿಳಿಸಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಎಂ. ಲಕ್ಷ್ಮಣ್, ನಮ್ಮ ಪಕ್ಷದ ಅಭ್ಯರ್ಥಿಯ ಆತ್ಮಸ್ಥೈರ್ಯ ಕುಗ್ಗಿಸುವ ಸಲುವಾಗಿ ನಾಮಪತ್ರ ಸ್ವೀಕರಿಸದಂತೆ ಬಿಜೆಪಿ ಅಭ್ಯರ್ಥಿ ರಘು ಆಕ್ಷೇಪಣೆ ಸಲ್ಲಿಸಿದ್ದರು. ಪರಿಣಾಮ ಎರಡು ದಿನಗಳ ಕಾಲ ನಮ್ಮ ಪಕ್ಷದ ಅಭ್ಯರ್ಥಿ ಪ್ರಚಾರಕ್ಕೆ ಹೋಗಲು ಸಾಧ್ಯವಾಗಿಲ್ಲ. ಆದರೆ ನಮ್ಮ ಪರ ವಕೀಲರು ಇದೀಗ ಸೂಕ್ತ ಉತ್ತರ ಕೊಟ್ಟಿದ್ದಾರೆ.

ಆದರೆ ಈ ಬಗ್ಗೆ ಆಕ್ಷೇಪಣೆ ಸಲ್ಲಿಸಿದ್ದ ರಘು ಅವರ ವಿರುದ್ದವೂ ಕೆಲ ಆರೋಪಗಳಿವೆ. ರಘುರವರು ಡಿ ದೇವರಾಜ ಅರಸು ನಿಗಮದ ಅಧ್ಯಕ್ಷರಾಗಿದ್ದಾರೆ‌. ಆ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸದೇ ಚುನಾವಣೆಗೆ ಸ್ಪರ್ಥಿಸಿದ್ದಾರೆ. ಲಾಭದಾಯಕ ಹುದ್ದೆಯಲ್ಲಿದ್ದುಕೊಂಡು ಚುನಾವಣೆಗೆ ಸ್ಪರ್ಧಿಸಿದ್ದಾರೆ. ಹೀಗಾಗಿ  ಈ ಬಗ್ಗೆ ನಾವು ಕೂಡ ಆಕ್ಷೇಪಣೆ ಸಲ್ಲಿಸುತ್ತೇವೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಹೇಳಿದರು.

Key words: We – file –objections- against -BJP candidate- Raghu Kautilya-KPCC spokesperson -M. Laxman.