ಬಿವೈ ವಿಜಯೇಂದ್ರಗೆ ಸಚಿವ ಸ್ಥಾನ ವಿಚಾರ: ಮಾಜಿ ಸಿಎಂ ಬಿಎಸ್ ವೈ ಪ್ರತಿಕ್ರಿಯಿಸಿದ್ದು ಹೀಗೆ.

Promotion

ಬೆಂಗಳೂರು,ಡಿಸೆಂಬರ್,7,2021(www.justkannada.in):  ಬಿವೈ ವಿಜಯೇಂದ್ರಕ್ಕೆ ಸಚಿವ ಸ್ಥಾನ ನೀಡುವ ಬಗ್ಗೆ ನಾನು ಮಾತನಾಡುವುದಿಲ್ಲ. ಈ ವಿಚಾರ ಪಕ್ಷದ ಹೈಕಮಾಂಡ್ ಗೆ ಬಿಟ್ಟಿದ್ದು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸದ ಕಡೆ ಬೆಂಬಲ ನೀಡುವಂತೆ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಕೋರಿದ್ದೇನೆ.  ಪರಿಷತ್ ಚುನಾವಣೆಯಲ್ಲಿ ಬಿಜೆಪಿ 15 ಸ್ಥಾನಗಳನ್ನ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ನವರು ಹಗುರವಾಗಿ ಮಾತನಾಡುತ್ತಿದ್ದಾರೆ. ಗ್ರಾಮೀಣಭಾಗದಲ್ಲಿ ಬಿಜೆಪಿ ಪರ ಅಲೆ ಇದೆ. ಜನರೇ ಕಾಂಗ್ರೆಸ್ ನಾಯಕರಿಗೆ ಉತ್ತರ ನೀಡುತ್ತಾರೆ ಎಂದು ಬಿಎಸ್ ಯಡಿಯೂರಪ್ಪ ತಿಳಿಸಿದರು.

Key words:  High Command- Decision minister-position-BY Vijayendra-Former CM -BS Yeddyurappa