ಬೆಂಗಳೂರು-ಮೈಸೂರು ಹೆದ್ದಾರಿ ಸಮಸ್ಯೆ ಬಗೆಹರಿಸುವ ಬಗ್ಗೆ ಕೇಂದ್ರದಿಂದ ಭರವಸೆ- ಸಿಎಂ ಬೊಮ್ಮಾಯಿ.

Promotion

ಬೆಂಗಳೂರು,ಸೆಪ್ಟಂಬರ್,9,2022(www.justkannada.in): ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿನ ಸಮಸ್ಯೆ ಬಗೆಹರಿಸುವ ಬಗ್ಗೆ ಕೇಂದ್ರ ಸರ್ಕಾರ ಭರವಸೆ ನೀಡಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬೊಮ್ಮಾಯಿ, ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಹಾನಿ ಸಂಬಂಧ ಕೇಂದ್ರ ಸರ್ಕಾರದ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ್ದೇವೆ.  ಡ್ರೈನೇಜ್ ಸಿಸ್ಟಮ್ ಬಗ್ಗೆ ಆಡಿಟ್ ಮಾಡಿಸೋದಾಗಿ ಕೇಂದ್ರ ಹೇಳಿದೆ. ವರದಿ ಬಳಿಕ ಹೆದ್ದಾರಿ ಸಮಸ್ಯೆ ನಿವಾರಿಸುವ ಭರವಸೆ ನೀಡಿದ್ದಾರೆ.  ಹೆದ್ದಾರಿ ಯೋಜನೆಗಳ ಕುರಿತು ಕೇಂದ್ರ ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದೇವೆ. ಗೊರಗುಂಟೆ ಪಾಳ್ಯ ಫ್ಲೈ ಓವರ್ ಸಮಸ್ಯೆ ಸರಿಪಡಿಸುವ ಬಗ್ಗೆ ಸಮಾಲೋಚಿಸಲಾಗಿದೆ.

ಬೆಂಗಳೂರು- ಚೆನ್ನೈ ಎಕ್ಸ್ ಪ್ರೆಸ್ ವೇ ಬಗ್ಗೆ ಹೈದರಾಬಾದ್ ರಸ್ತೆಗಳಿಗೆ ಸಂಪರ್ಕ ಕಲ್ಪುಸುವ ಬಗ್ಗೆ ಈ ಎಲ್ಲದರ ಬಗ್ಗೆ ಕೇಂದ್ರದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

Key words: CM Bommai -promises – solve – Bangalore-Mysore –highway- problem.