ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ವಾಪಸ್ ಗೆ ಆಗ್ರಹ: ಮೈಸೂರಿನಲ್ಲಿ ಹೆದ್ದಾರಿ ತಡೆದು ರೈತರಿಂದ ಪ್ರತಿಭಟನೆ.

Promotion

ಮೈಸೂರು,ನವೆಂಬರ್,26,2021(www.justkannada.in): ಭೂ ಸುಧಾರಣೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಾಸ್‌ ‌ಗೆ ಆಗ್ರಹಿಸಿ ಮೈಸೂರಿನ ಎಪಿಎಂಸಿ ಬಳಿ ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಭಟನೆ ನಡೆಸಿತು.

ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಮೈಸೂರು-ಊಟಿ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸಿದರು. ಗೋವುಗಳನ್ನ ತಂದು ರಸ್ತೆಗೆ‌ ನಿಲ್ಲಿಸಿ ಧರಣಿ ನಡೆಸಿದ ರೈತರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ದೆಹಲಿಯಲ್ಲಿ ರೈತರ ಹೋರಾಟಕ್ಕೆ ಮಣಿದ ಪ್ರಧಾನಿ ಮೋದಿ ಮೂರು ಕೃಷಿ ತಿದ್ದುಪಡಿ ಕಾಯ್ದೆಯನ್ನ ಅಧಿವೇಶನದಲ್ಲಿ ವಾಪಸ್ ಪಡೆಯುವುದಾಗಿ ಘೋಷಿಸಿದ್ದಾರೆ. ಕೃಷಿ ತಿದ್ದುಪಡಿ ಕಾಯ್ದೆ ರದ್ಧತಿಗೆ ಕೇಂದ್ರ ಸಚಿವ ಸಂಪುಟದಲ್ಲೂ ಅನುಮೋದನೆ ನೀಡಲಾಗಿದೆ.

Key words: Land Reform- APMC- Act -Highway –block-protest-farmer- Mysore