ಮೈತ್ರಿ ಸರ್ಕಾರದ ಪತನದ ಬಗ್ಗೆ ಯಾರೂ ಮಾತನಾಡಬೇಡಿ: ಬಿಜೆಪಿ ನಾಯಕರಿಗೆ ಬಿಎಸ್ ವೈ ಕಿವಿಮಾತು

Promotion

ಹುಬ್ಬಳ್ಳಿ:ಮೇ-5:(www.justkannada.in) ರಾಜ್ಯದಲ್ಲಿನ ಮೈತ್ರಿ ಸರ್ಕಾರದ ಪತನದ ಬಗ್ಗೆ ಯಾರೂ ಮಾತನಾಡಬೇಡಿ. ಮೇ 23 ರಂದು ಚುನಾವಣಾ ಫಲಿತಾಂಶದ ಬಳಿಕ ನಿರ್ಧಾರ ಮಾಡೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಬಿಜೆಪಿ ನಾಯಕರಿಗೆ ಕಿವಿಮಾತು ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಸಮ್ಮಿಶ್ರ ಸರ್ಕಾರ ಪತನದ ಬಗ್ಗೆ ಯೂರೂ ಹೇಳಿಕೆಗಳನ್ನು ನೀಡಬೇಡಿ ಎಂದು ಹೇಳಿದ್ದಾರೆ. ಮೈತ್ರಿ ಸರ್ಕಾರದ ಭ್ರಷ್ಟಾಚಾರ, ಅಸಮರ್ಪಕ ಆಡಳಿತಕ್ಕೆ ರಾಜ್ಯದ ಜನತೆ ರೋಸಿ ಹೋಗಿದ್ದು, ಮತದಾರರೇ ಅವರಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

ಇನ್ನು ರಾಜ್ಯದಹ್ಯಕ್ಷ ಸ್ಥಾನ ಬದಲಾವಣೆ ವಿಚಾರವಾಗಿ ಮಾತನಾಡಿದ ಬಿಎಸ್ ವೈ, ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧ. ರಾಷ್ಟ್ರ ನಾಯಕರು ಚುನಾವಣೆ ಬಳಿಕ ನಿರ್ಧಾರವನ್ನು ಕೈಗೊಳ್ಳುತ್ತಾರೆ ಎಂದರು.

ಮೇ 23ರಂದು ಲೋಕಸಭಾ ಚುನಾವಣಾ ಫಲಿತಾಂಶ ಬರಲಿದೆ. ಅದು ದೇಶದ ಮತದಾರರು ನೀಡುವ ತೀರ್ಮಾನವಾಗಿದ್ದು, ಫಲಿತಾಮ್ಶದ ಬಳಿಕವೂ ಮೋದಿಯವರೇ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕುಂದಗೋಳದಲ್ಲಿ ನಮ್ಮ ಅಭ್ಯರ್ಥಿ ಗೆಲುವು ನಿಶ್ಚಿತ. ಸರ್ಕಾರವೇ ಕುಂದಗೋಳದಲ್ಲಿ ಬಂದು ಕುಳಿತಿದೆ. ಹಣದ ಹೊಳೆಯನ್ನೇ ಹರಿಸುತ್ತಿದ್ದಾರೆ. ಆದರೂ ಅವರ ಅಭ್ಯರ್ಥಿ ಸೋಲಲಿದ್ದಾರೆ. ಅವರು ಹಣಬಲದಿಂದ ಚುನಾವಣೆ ಗೆಲ್ಲಲು ಹೊರಟಿದ್ದಾರೆ. ಅದು ಸಾಧ್ಯವಿಲ್ಲ ಎಂದು ಹೇಳಿದರು.

ಮೈತ್ರಿ ಸರ್ಕಾರದ ಪತನದ ಬಗ್ಗೆ ಯಾರೂ ಮಾತನಾಡಬೇಡಿ: ಬಿಜೆಪಿ ನಾಯಕರಿಗೆ ಬಿಎಸ್ ವೈ ಕಿವಿಮಾತು
JDS-Congress,coalition government,B S Yedyurappa,Hubli