ವಾರಣಾಸಿಗೆ ಭೇಟಿ: ಕಾಲಭೈರವೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ.

Promotion

ಉತ್ತರ ಪ್ರದೇಶ,ಡಿಸೆಂಬರ್,13,2021(www.justkannada.in):  ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಣಾಸಿಗೆ ಭೇಟಿ ನೀಡಿದ್ದು ಕಾಲಭೈರವೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಕಾಲಭೈರವೇಶ್ವರ ದೇಗುಲದಲ್ಲಿ ಆರತಿ ಬೆಳಗಿ ಪ್ರಧಾನಿ ಮೋದಿ ನಮಿಸಿದರು ಪ್ರಧಾನಿ ಮೋದಿ ಅವರಿಗೆ ದೇಗುಲದ ಆಡಳಿತ ಮಂಡಳಿಯಿಂದ ಕಾಲಭೈರವನ ಫೋಟೋ ನೀಡಿ ಸನ್ಮಾನ ಮಾಡಲಾಯಿತು. ಕಾಶಿ ವಿಶ್ವನಾಥನ ದೇಗುಲಕ್ಕೂ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ.

ವಾರಣಾಸಿಯಲ್ಲಿ ಕಾಶಿ ವಿಶ್ವನಾಥ ಕಾರಿಡಾರ್ ಅನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ  ಅವರು ಇಂದು ಉದ್ಘಾಟಿಸಲಿದ್ದಾರೆ. 2014 ರ ಚುನಾವಣೆಯಲ್ಲಿ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ನಾಮನಿರ್ದೇಶನಗೊಂಡ ನಂತರ ಪ್ರಧಾನಿ ನರೇಂದ್ರ ಮೋದಿ ಕಾಶಿ ವಿಶ್ವನಾಥ ಕಾರಿಡಾರ್ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ  ಇಂದು ಕಾಶಿ ವಿಶ್ವನಾಥ ಕಾರಿಡಾರ್ ಅನ್ನು ಉದ್ಘಾಟಿಸುವ (ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ಈಡೇರಿಸಲಿದ್ದಾರೆ.

Key words: Visit – Varanasi-PM Modi – special –worship- Kalabhairaveshwara.