ಹೊಸ ವೈರಸ್ ಒಮಿಕ್ರಾನ್ ಪತ್ತೆ ಹಿನ್ನೆಲೆ: ರಾಜ್ಯದಲ್ಲಿ ಹೊಸ ಮಾರ್ಗಸೂಚಿ ಜಾರಿ- ಗೃಹ ಸಚಿವ ಅರಗ ಜ್ಞಾನೇಂದ್ರ.

Promotion

ಬೆಂಗಳೂರು,ಡಿಸೆಂಬರ್,3,2021(www.justkannada.in):  ಕೊರೋನಾ ಹೊಸ ತಳಿ ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ಹೊಸ ಮಾರ್ಗಸೂಚಿ ಜಾರಿ ಮಾಡಲಾಗುತ್ತದೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಹೊಸ ವೈರಸ್ ಬಗ್ಗೆ ಆತಂಕಬೇಡ.  ಈ ಸಂಬಂಧ ಹೊಸ ಮಾರ್ಗಸೂಚಿ ಜಾರಿ ಮಾಡಲಾಗುತ್ತದೆ. ಪೊಲೀಸರು ಏನು ಮಾಡಬೇಕು ಎಂಬುದನ್ನ ಸೂಚನೆ ನೀಡುತ್ತೇವೆ ಎಂದು ತಿಳಿಸಿದರು.

ಇನ್ನು ಒಮಿಕ್ರಾನ್ ಪತ್ತೆ ಹಿನ್ನೆಲೆ ಅಧಿವೇಶನ ನಡೆಸುವ ಬಗ್ಗೆ ಟಾಸ್ಕ್ ಫೋರ್ಸ್ ಸಿಎಂ ಬಸವರಾಜ ಬೊಮ್ಮಾಯಿ, ಸ್ಪೀಕರ್ ಕಾಗೇರಿ ಅವರು ಚರ್ಚಿಸಿ ನಿರ್ಧಾರ ಮಾಡುತ್ತಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು.

Key words: New virus- omicron –detection-Implementation -new Guidelines- Home Minister -Araga Jnanendra.