‘ಉದ್ಯಮಿಯಾಗು ಉದ್ಯೋಗ ನೀಡು’ ಕಾರ್ಯಾಗಾರದ ವೇದಿಕೆಗೆ ನಟ ಪುನೀತ್ ರಾಜ್ ಕುಮಾರ್ ‌ಹೆಸರಿಡಲು ತೀರ್ಮಾನ

ಬೆಂಗಳೂರು, ನವೆಂಬರ್,9,2021(www.justkannada.in): ತಮ್ಮ ನಡೆ, ನುಡಿ, ಸರಳತೆ, ಸಮಾಜ ಸೇವೆ ಮೂಲಕ ಯುವ ಜನತೆಗೆ ಮಾದರಿಯಾಗಿದ್ದ  ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹೆಸರನ್ನು ಕಲಬುರಗಿಯಲ್ಲಿ ಇದೇ 11 ರಂದು ನಡೆಯಲಿರುವ ‘ಉದ್ಯಮಿಯಾಗು ಉದ್ಯೋಗ ನೀಡು’ ಕಾರ್ಯಾಗಾರದ ವೇದಿಕೆಗೆ ಹೆಸರಿಡಿಲು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ತೀರ್ಮಾನಿಸಿದ್ದಾರೆ.

ಇದೇ ತಿಂಗಳ  11 ರಂದು ಕಲಬುರಗಿಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ವತಿಯಿಂದ ಉದ್ಯಮಿಯಾಗಿ ಉದ್ಯೋಗ ನೀಡು ಮತ್ತು  ಕೈಗಾರಿಕೆ ಅದಾಲತ್  ಕಾರ್ಯಾಗಾರವನ್ನು ಆಯೋಜಿಸಿದೆ. ಕಾರ್ಯಾಗಾರ ನಡೆಯುವ ವೇದಿಕೆಗೆ “ಪುನೀತ್ ರಾಜ್ ಕುಮಾರ್” ಎಂದು ಹೆಸರಿಟ್ಟು ಆಗಲಿದ ಮೇರು ನಟನೆಗೆ ಗೌರವ ಸಮರ್ಪಣೆ ಸಲ್ಲಿಸಲು ಸಚಿವ ಮುರುಗೇಶ್ ನಿರಾಣಿ ಅವರು ಮುಂದಾಗಿದ್ದಾರೆ.

ಕಲಬುರಗಿ ಮಾತ್ರವಲ್ಲದೆ, ಮುಂದೆ ನಡೆಯಲಿರುವ ಮೈಸೂರು, ಬೆಳಗಾವಿ, ಕರಾವಳಿ ಭಾಗದ ಮಂಗಳೂರು ಹಾಗೂ ತುಮಕೂರಿನಲ್ಲಿ “ಉದ್ಯಮಿಯಾಗು ಉದ್ಯೋಗ ನೀಡು” ಕಾರ್ಯಕ್ರಮದ ವೇದಿಕೆಗೆ ಪುನೀತ್ ರಾಜ್ ಕುಮಾರ್ ಹೆಸರಿಡಲು ಸರ್ವಸಮ್ಮತದ ತೀರ್ಮಾನವನ್ನು ಸಚಿವರು ತೆಗೆದುಕೊಂಡಿದ್ದಾರೆ.

ಕೇವಲ ಸಿನಿಮಾ ಕ್ಷೇತ್ರಕ್ಕೆ ಗುರುತಿಸಿಕೊಳ್ಳದ ಪುನೀತ್ ರಾಜ್ ಕುಮಾರ್ ಅನೇಕ ಸಮಾಜ‌ ಸೇವೆಗಳಲ್ಲೂ ತೊಡಗಿಸಿಕೊಂಡಿದ್ದರು. ನಿಜ ಜೀವನದಲ್ಲಿ ಪುನೀತ್ ರಾಜ್ ಕುಮಾರ್ ರಾಜಕುಮಾರನಾಗಿಯೇ ಮೆರೆದರು. ಮುಂದಿನ ಯುವಜನಾಂಗಕ್ಕೆ ಅವರ ಹೆಸರು “ಆಜಾರಮರಗೊಳಿಸಲು” ಈ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿರುವುದಾಗಿ ಸಚಿವ ನಿರಾಣಿ ಅವರು ಹೇಳಿದ್ದಾರೆ.

ಯುವಜನತೆಯು ಯಾರೊಬ್ಬರ ಮೇಲೆ ಅವಲಂಬಿತರಾಗದೆ, ಸ್ವಾವಲಂಬಿಗಳಾಗಿ  ಬದುಕಬೇಕು ಎಂಬುದು ಅಪ್ಪು ಅವರ ಕನಸಾಗಿತ್ತು. ಅವರು ಕಂಡಿದ್ದ ಕನಸನ್ನು ನನಸು ಮಾಡುವ ಸಣ್ಣ ಪ್ರಯತ್ನ ಇದಾಗಿದೆ ಎಂದಿದ್ದಾರೆ.

ಪುನೀತ್​ ರಾಜ್​ ಕುಮಾರ್​ ನಟನಾಗಿ ಮಾತ್ರವಲ್ಲ ನಿರ್ಮಾಪಕನಾಗಿಯೂ ಉದ್ಯಮಶೀಲತೆ ತೋರಿದರು. ಅವರು ಪಿಆರ್ ​ಕೆ ಪ್ರೊಡಕ್ಷನ್​ ಆರಂಭಿಸುವ ಮೂಲಕ ಸಿನಿಮಾ ನಿರ್ಮಾಣದಲ್ಲಿಯೂ ತೊಡಗಿಕೊಂಡಿದ್ದರು. ಹೊಸ ಪ್ರತಿಭೆಗಳಿಗೆ ಮಣೆ ಹಾಕುವ ಮೂಲಕ ಸ್ಯಾಂಡಲ್​ ವುಡ್​​ನಲ್ಲಿ ಅವರು ಎಲ್ಲರಿಂದಲೂ ಮೆಚ್ಚುಗೆ ಗಳಿಸಿದ್ದರು ಎಂದು ಸಚಿವ ಮುರುಗೇಶ್ ನಿರಾಣಿ ಅವರು ಕೊಂಡಾಡಿದರು

ಕೇವಲ ಸಿನಿಮಾ ಕ್ಷೇತ್ರವಲ್ಲದೆ, ಸಾವಿರಾರು ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ವೃದ್ಧರ ಮತ್ತು ಅನಾಥರ ಪೋಷಣೆ ಜತೆಗೆ ಹೆಣ್ಣು ಮಕ್ಕಳಿಗೆ ಶಿಕ್ಷಣ ಧಾರೆ ಎರೆದಿದ್ದರು. ಗೋ ಶಾಲೆಗಳನ್ನು ಪೋಷಣೆ ಮಾಡುತ್ತಿದ್ದರು. ತಾನು ಸಮಾಜಕ್ಕೆ ಈ ಕೊಡುಗೆ ಕೊಟ್ಟಿದ್ದೇನೆ ಎಂದು ಎಲ್ಲೂ ಬಹಿರಂಗಪಡಿಸದೇ ಸಮಾಜ ಸೇವೆ ಮಾಡುತ್ತಿದ್ದರು. ಈ ಮೂಲಕ ದೊಡ್ಡಮನೆಯ ದೊಡ್ಡತನ ಮೆರೆದಿದ್ದರು. ಅಂತಹ ಮೇರುನಟ ನಮಗೆ ಎಂದೆಂದಿಗೂ ಮಾದರಿ ಎಂದು ನಿರಾಣಿ ಕೊಂಡಾಡಿದ್ದಾರೆ.

ಸೋಮವಾರ ನಡೆದ ಪುನೀತ್ ರಾಜ್ ಕುಮಾರ್ ಅವರ 11 ದಿನದ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಸಚಿವ ನಿರಾಣಿ ಅವರು ಭಾಗವಹಿಸಿ ಆಗಲಿದ ಯುವನಟನಿಗೆ ಶ್ರದ್ಧಾಂಜಲಿ ಅರ್ಪಿಸಿದರು.

ಸದಾಶಿವ ನಗರದಲ್ಲಿರುವ ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ತೆರಳಿದ್ದ ಅವರು ಅಪ್ಪುವಿನ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ‌ಗೌರವ ನಮನ ಸಲ್ಲಿಸಿದರು. ಬಳಿಕ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ, ಅವರನ್ನು ಸಚಿವ ಮುರುಗೇಶ್ ನಿರಾಣಿ ಭೇಟಿಯಾಗಿ ಸಾಂತ್ವನ ಹೇಳಿದರು.

ನಂತರ ಪುನೀತ್ ರಾಜ್ ಕುಮಾರ್ ಸಹೋದರರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್, ಸಂಬಂಧಿಕರು‌ ಆದ ಮಧು ಬಂಗಾರಪ್ಪ, ‌ಸೇರಿದಂತೆ ಮತ್ತಿತರರ ಜೊತೆ ಪ್ರಸಾದ ಸೇವಿಸಿದರು.

Key words: Actor- Punith Rajkumar -name – workshop-udyoga nidu-udyamiyagu- minister –murugesh nirani

ENGLISH SUMMARY..

‘UDYAMI AAGU, UDYOGA NEEDU’ PROGRAM’S STAGE WILL BE NAMED AFTER PUNEETH RAJKUMAR: NIRANI

• ‘Udyami Aagu, Udyoga Needu’ program in Kalaburagi on Nov 11
• Program stage to be named after Puneeth Rajkumar
• Govt move to encourage youths inspired by Puneeth

Bengaluru, November 9: Seeking to honour Powerstar Puneeth Rajkumar who became a role model for youths with his dignified conduct, simplicity and social service, Large and Medium Industries Minister Murugesh Nirani has decided to name the stage of ‘Udyami Aagu, Udyoga Needu’ (Be an Entrepreneur Become an Employer) workshop in Kalaburagi on November 11 after the late actor.

The Department of Industries and Commerce will conduct ‘Udyami Aagu, Udyoga Needu’ workshop and Kaigarika Adalat in Kalaburagi on November 11, 2021. Minister Murugesh Nirani has decided to honour actor Puneeth Rajkumar by naming the program stage after him.

Not just Kalaburagi, Minister Murugesh Nirani has also decided to name the stage for ‘Udyami Aagu, Udyoga Needu’ programs in Mysuru, Mangaluru, Tumakuru and Belagavi after Puneeth Rajkumar.

Mentioning about the late actor’s entrepreneurship skills, minister Nirani lauded him for encouraging young talents in his films. “Puneeth not only excelled as an actor but also proved his entrepreneurship skills as a producer. He gave opportunities to new talents in films through his PRK Production and earned praises from everyone. He helped thousands of students especially girl students get free education. He had also extended a helping hand to old and destitute and cow care centres, but never sought publicity. Puneeth’s conduct and his noble deeds are worthy of emulation,” Nirani lauded.

Praising the contributions of Puneeth Rajkumar for social causes, Minister Nirani said the actor was a role model for the youths. “Puneeth Rajkumar did not restrict himself to the film industry but he was also involved in social service. He lived like a king in real life. We have taken this decision so that the coming generations remember him. He wanted our youths to be self-reliant, so it’s a small effort from our side to realise his dream,” Nirani stated.

The minister visited Puneeth Rajkumar’s Sadashivanagar residence on his 11th day ritual (Punya Thithi) on Monday and paid his respects to the departed young actor. Nirani later paid floral tributes to Puneeth’s photo and consoled his wife Ashwini. He then partook of the prasadam along with Shivarajkumar, Geetha Shivarajkumar, Raghavendra Rajkumar, Madhu Bangarappa and others.