ಕಾರ್ಯಕರ್ತನ ಮೇಲೆ ಕೈ ಮಾಡಿದ ವಿಚಾರಕ್ಕೆ ಸ್ಪಷ್ಟನೆ ನೀಡಿದ ಡಿ.ಕೆ ಶಿವಕುಮಾರ್.

ಬೆಂಗಳೂರು,ಜುಲೈ,10,2021(www.justkannada.in): ತಮ್ಮ ಹೆಗೆಲ ಮೇಲೆ ಕೈ ಹಾಕಿದ ಕಾರ್ಯಕರ್ತನ ಮೇಲೆ ಕೈ ಮಾಡಿದ್ಧಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.jk

ಜಿ. ಮಾದೇಗೌಡರ ಆರೋಗ್ಯ ವಿಚಾರಿಸಲು ಮಂಡ್ಯ ಜಿಲ್ಲೆ ಮದ್ಧೂರು ತಾಲ್ಲೂಕಿನ ಕೆ.ಎಂ ದೊಡ್ಡಿಗೆ ಆಗಮಿಸಿದ್ದ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೆಗಲ ಮೇಲೆ ಕಾರ್ಯಕರ್ತರೊಬ್ಬರು ಕೈ ಹಾಕಿದ್ದು ಈ ವೇಳೆ ಡಿ.ಕೆ ಶಿವಕುಮಾರ್ ಕಾರ್ಯಕರ್ತನಿಗೆ ಥಳಿಸಿದ್ದರು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿ ವ್ಯಂಗ್ಯವಾಡಿದ್ಧ ಬಿಜೆಪಿ, ‘ಡಿ.ಕೆ.ಶಿವಕುಮಾರ್​ ಅವರಿಗೆ ರೌಡಿ ಕೊತ್ವಾಲನೊಂದಿಗಿದ್ದ ಗತಕಾಲದ ನೆನಪು ಕಾಡಿತೇ? ಒಂದು ರಾಷ್ಟ್ರೀಯ ಪಕ್ಷದ ರಾಜ್ಯ ಅಧ್ಯಕ್ಷನಾಗಿದ್ದುಕೊಂಡು ಸಾರ್ವಜನಿಕವಾಗಿ ಒಬ್ಬ ವ್ಯಕ್ತಿಯ ಮೇಲೆ ಈ ರೀತಿ ಹಲ್ಲೆ ಮಾಡಿರುವುದು ಅಕ್ಷಮ್ಯ’ ಎಂದು ಕಿಡಿಕಾರಿತ್ತು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಹೆಗಲ ಮೇಲೆ ಕೈ ಹಾಕೋದು ಅಂದ್ರೆ ಏನರ್ಥ.  ನೋಡುವವರು ಏನು ಅಂದುಕೊಳ್ತಾರೆ. ಇದಕ್ಕೆಲ್ಲಾ ಅವಕಾಶ ನೀಡಲು ಆಗುತ್ತಾ..? ಎಂದು ಹೇಳುವ ಮೂಲಕ ತಮ್ಮ ನಡೆಯನ್ನ ಸಮರ್ಥಿಸಿಕೊಂಡಿದ್ದಾರೆ.

Key words: KPCC –president- DK Sivakumar- clarified – activist.