ಕೊರಟಗೆರೆ ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನ ಜೆಡಿಎಸ್ ಪಾಲು

ತುಮಕೂರು,ನವೆಂಬರ್,05,2020(www.justkannada.in): ಬಾರಿ ಕುತೂಹಲ ಕೆರಳಿಸಿದ್ದ ಕೊರಟಗೆರೆ ಪಟ್ಟಣ ಪಂಚಾಯಿತಿ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಸ್ಥಾನವು ಜೆಡಿಎಸ್ ಗೆ ಒಲಿದಿದೆ.jk-logo-justkannada-logoಮಾಜಿ ಉಪ ಮುಖ್ಯಮಂತ್ರಿ ಡಾಕ್ಟರ್ ಜಿ ಪರಮೇಶ್ವರ್ ಸ್ವ ಕ್ಷೇತ್ರವಾದ ಕೊರಟಗೆರೆ ಪಟ್ಟಣ ಪಂಚಾಯಿತಿ ಆಡಳಿತ ಚುಕ್ಕಾಣಿ ಜೆಡಿಎಸ್ ಪಾಲಾಗಿದೆ. ಅವಿರೋಧವಾಗಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಮಾಡಲಾಗಿದೆ.

ಗುರುವಾರ ನಿಗದಿಯಾಗಿದ್ದ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಸ್ಥಾನಗಳ ಚುನಾವಣೆಯಲ್ಲಿ ಜೆಡಿಎಸ್ ನ ಮಂಜುಳ ಸತ್ಯನಾರಾಯಣ ಅಧ್ಯಕ್ಷೆಯಾಗಿ ಮತ್ತು ಉಪಾಧ್ಯಕ್ಷೆಯಾಗಿ ಭಾರತಿ ಸಿದ್ದಮಲ್ಲಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿದು ಬಂದಿದೆ.President,Koratagere,Town,Panchayat,Vice,President,position,JDS

key words : President-Koratagere-Town-Panchayat-Vice-President-position- JDS