ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ್ರೆ ಕಾನೂನು ಕ್ರಮ: ಸ್ವಯಂ ಸೇವಕರಿಗೆ ಗುರುತಿನ ಚೀಟಿ –ಮೈಸೂರು ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ.

ಮೈಸೂರು,ಡಿಸೆಂಬರ್,27,2021(www.justkannada.in): ನಾಳೆ ರಾತ್ರಿಯಿಂದ ನೈಟ್ ಕರ್ಫ್ಯೂ ಜಾರಿಗೆ ಬರಲಿದ್ದು ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದರೇ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ತಿಳಿಸಿದರು.

ನೂತನ ವರ್ಷಾಚರಣೆಗೆ ಸರ್ಕಾರ ನಿರ್ಬಂಧ ಹೇರಿರುವ ಹಿನ್ನೆಲೆ. ಮೈಸೂರು ನಗರ ಪೊಲೀಸ್ ಆಯುಕ್ತ ಡಾ ಚಂದ್ರಗುಪ್ತ  ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಓಮಿಕ್ರಾನ್ ವೈರಸ್ ಸೋಂಕು ತಡೆಗಟ್ಟುವ ಸಲುವಾಗಿ ನಾಳೆಯಿಂದ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುತ್ತಿದೆ. ಇದೇ ರೀತಿ ನೂತನ ವರ್ಷಾಚರಣೆರೂ ಸರ್ಕಾರದ ನಿರ್ದೇಶದನ್ವಯ ನಿರ್ಬಂಧಗಳನ್ನು ಹೇರಲಾಗಿದೆ. ಡಿಸೆಂಬರ್ 30, 31 ಹಾಗೂ ಜಬವರಿ 1, 2 ರಂದು ಅನ್ವಯವಾಗುವಂತೆ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲಾಗಿದೆ.ಕೋವಿಡ್ ಮಾರ್ಗಸೂಚಿಗಳನ್ನು ಧಿಕ್ಕರಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.Traffic – Mysore-police-Siege - 300 vehicles

ಹೊಸ ವರ್ಷಾಚರಣೆಗೆ ಹೊಸ ಮಾರ್ಗಸೂಚಿ ಜಾರಿಯಾಗಲಿದೆ. ನಿಯಮ ಮೀರಿ ಪಾರ್ಟಿ ಮಾಡಿದ್ರೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತೆ. ಪಾರ್ಟಿ ಆಯೋಜಕರು, ಪಾರ್ಟಿಯಲ್ಲಿ ಭಾಗವಹಿಸಿದವರ ಮೇಲೂ ಕ್ರಮ ಕೈಗೊಳ್ಳಲಾಗುತ್ತದೆ. ಸಾರ್ವಜನಿಕರು ನಿಯಮ ಪಾಲಿಸಿ ಸೊಂಕು ಹರಡದಂತೆ ಎಚ್ಚರ ವಹಿಸಿ ಎಂದು ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಹೇಳಿದರು.

ಪೊಲೀಸ್ ಇಲಾಖೆಯಿಂದ ಸ್ವಯಂ ಸೇವಕರಿಗೆ ಗುರುತಿನ ಚೀಟಿ ವಿತರಣೆ.

ಕೊರೊನಾ ನಿಯಂತ್ರಣಕ್ಕಾಗಿ ಮೈಸೂರು ಪೊಲೀಸರು ವಿನೂತನ ಪ್ರಯತ್ನ ಮಾಡುತ್ತಿದ್ದು,  ಸಾರ್ವಜನಿಕರ ಸಹ ಭಾಗಿತ್ವದೊಂದಿಗೆ ಕೋವಿಡ್ ನಿಯಂತ್ರಣಕ್ಕೆ ಮುಂದಾಗಿದ್ದೇವೆ. ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಲು ಮುಂದೆ ಬರುವವರಿಗೆ ಗುರುತಿನ ಚೀಟಿ ನೀಡಲಾಗುತ್ತದೆ MyCop (Mysuru covid policing) Volunteer card, ಕೋವಿಡ್ ಮಾರ್ಗಸೂಚಿ ಅನುಷ್ಠಾನ ಪ್ರತಿನಿಧಿ ಎಂಬ ಗುರುತಿನ ಚೀಟಿಯನ್ನು ಪೊಲೀಸ್ ಇಲಾಖೆಯಿಂದ ವಿತರಣೆ ಮಾಡಲಾಗುತ್ತದೆ.

ಪ್ರತಿಯೊಂದು ಪೊಲೀಸ್ ಠಾಣೆಯಲ್ಲಿ 200 ಮಂದಿಯನ್ನು ನಿಯೋಜನೆ ಮಾಡಿಕೊಳ್ಳಲು ಚಿಂತನೆ ನಡೆಸಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಬರುವವರೆಗೂ ಈ ರೀತಿಯ ಪ್ರಯತ್ನ ಮುಂದುವರಿಯಲಿದೆ. ನಂತರದ ದಿನಗಳಲ್ಲಿ ಬೇರೆ ಉದ್ದೇಶಗಳಿಗೂ ಸ್ವಯಂ ಸೇವಕರನ್ನು ಬಳಸಿಕೊಳ್ಳಲಾಗುತ್ತದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಡಾ ಚಂದ್ರಗುಪ್ತ ತಿಳಿಸಿದರು.

Key words: Legal action – violation -Covid Guidelines-Volunteer –Identity- Card-Mysore -Police Commissioner -Dr. Chandragupta.