ಜೆಡಿಎಸ್ ಅಭ್ಯರ್ಥಿಗಳ ಸೋಲಿಗೆ ಮಾಜಿ ಸಿಎಂ ಹೆಚ್.ಡಿಕೆ ನೀಡಿದ ಕಾರಣವಿದು.

ಬೆಂಗಳೂರು,ಡಿಸೆಂಬರ್,14,2021(www.justkannada.in):   ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನ ಪರಿಷತ್ ನ 25 ಸ್ಥಾನಗಳಿಗೆ ನಡೆದ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಜೆಡಿಎಸ್ ಒಂದು ಕ್ಷೇತ್ರದಲ್ಲಿ ಮಾತ್ರ ಗೆಲುವಿನ ನಗೆ ಬೀರಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ಸೋಲಿಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಾರಣವನ್ನ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಹಣ ಬಲ ಮತ್ತು ಜನ ಬಲದ ನಡುವಿನ ಹೋರಾಟದಲ್ಲಿ ಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ. ರಾಷ್ಟ್ರೀಯ ಪಕ್ಷಗಳ ಹಣದ ಅಬ್ಬರದಲ್ಲಿ ನಾವು ಹಿನ್ನಡೆ ಅನುಭವಿಸಿದ್ದೇವೆ. ಆಣೆ, ಪ್ರಮಾಣಗಳ ನಡುವೆಯೂ ನೈತಿಕ ನೆಲೆಯಲ್ಲಿ ಸೆಣಸಿದ್ದೇವೆ.

2023ರ ವಿಧಾನಸಭೆ ಚುನಾವಣೆಯೇ ನಮ್ಮ ಗುರಿ ಎಂದು ಹಿಂದೆಯೇ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ. ಆ ನಿಟ್ಟಿನಲ್ಲಿ ನಮ್ಮ ತಯಾರಿ ನಡೆದಿದೆ. ಆದರೂ ಈ ಚುನಾವಣೆಯಲ್ಲಿ ಪ್ರಯತ್ನ ಮಾಡಿದ್ದೇವೆ. ʼದೊಡ್ಡ ಪಕ್ಷಗಳ ಕಾಂಚಾಣ ಹಂಚಿಕೆʼ ನಡುವೆ ನಾವು ಹಿಂದೆ ಬಿದ್ದಿದ್ದೇವೆ ಎಂದು ತಿಳಿಸಿದ್ದಾರೆ.

ಚುನಾವಣೆ ಎಂದರೆ ಸೋಲು-ಗೆಲುವು. ಗೆಲುವಿಗಾಗಿ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಅವರೇ ನಮ್ಮ ಶಕ್ತಿ. ಅವರೆಲ್ಲರಿಗೂ ನನ್ನ ಕೃತಜ್ಞತೆಗಳು. ಈಗ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುತ್ತಿದ್ದೇವೆ. ಹಣಬಲದಿಂದ ಎದುರಾಗುವ ಇಂಥ ಸೋಲುಗಳಿಗೆ ಜೆಡಿಎಸ್‌ ಎಂದೂ ಧೃತಿಗೆಡುವುದಿಲ್ಲ ಎಂದು ಹೆಚ್.ಡಿಕೆ ತಿಳಿಸಿದ್ದಾರೆ.

ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಈ ಚುನಾವಣೆಯ ಮತದಾರರು. ಜನರೇ ನೇರವಾಗಿ ಹಕ್ಕು ಚಲಾಯಿಸುವ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ ಶಕ್ತಿ ಏನೆಂಬುದು ತಿಳಿಯಲಿದೆ. ಪಕ್ಷ ಮತ್ತೆ ಪುಟಿದೆದ್ದು ಬರಲಿದೆ. ಜನರಲ್ಲಿ ಜೆಡಿಎಸ್‌ ಬಗೆಗಿನ ವಿಶ್ವಾಸವನ್ನು ಅಳಿಸಲಾಗದು ಎಂದು ಹೆಚ್.ಡಿಕೆ ವಿಶ್ವಾಸದ ನುಡಿಗಳನ್ನಾಡಿದ್ದಾರೆ.

Key words: legislative council-reason -behind – defeat – JDS candidates -former CM HD Kumaraswamy

ENGLISH SUMMARY…

Former CM HDK’s reason for JDS candidates failure in Legislative Council polls
Bengaluru, December 14, 2021 (www.justkannada.in): The results of the election held for the 25 legislative council seats have been announced. The JDS has won only one seat. Former Chief Minister H.D. Kumaraswamy has given the following reason for JDS candidates’ failure.
In his tweet, the former CM stated, “It is sad to see that the people’s strength has taken a setback in the fight between money and muscle power. The JDS has failed amidst the money power of the national parties. However, we have given a fight on moral grounds.”
“Earlier also I have mentioned that our target is the 2023 assembly elections, which I repeat even now. We are getting prepared for that. Even though we have made our efforts in these elections to win, but have failed in front of the money power of national parties. Representatives of the local bodies were the voters in this election. But people are the decision-makers in the assembly elections, where you will come to know about the strength of our party. I am sure that our party will bounce back. Nobody can wipe out the confidence that exists in the hearts of the people on JDS,” his tweet read.
Keywords: JDS/ H.D. Kumaraswamy/ LC polls/ failure/ one seat