ಡಿ.18 ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್.

ಮೈಸೂರು,ನವೆಂಬರ್,8,2021(www.justkannada.in): ಡಿಸೆಂಬರ್ 18 ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದ್ದು ಹೆಚ್ಚಿನ ಪ್ರಕರಣಗಳನ್ನ ಇತ್ಯರ್ಥಪಡಿಸುವ ಗುರಿ ಇದೆ ಎಂದು ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾದೀಶರಾದ ಎಂ.ಎಲ್ ರಘುನಾಥ್ ತಿಳಿಸಿದರು.

ಲೋಕ್ ಅದಾಲತ್ ಕುರಿತು ಮೈಸೂರು ನ್ಯಾಯಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಎಂ.ಎಲ್ ರಘುನಾಥ್ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ರಾಜ್ಯಾದ್ಯಂತ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ಮೈಸೂರು ನಗರ ಮತ್ತು ತಾಲೂಕುಗಳಲ್ಲಿ 1,03,472 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ. ಅವುಗಳಲ್ಲಿ 49,246 ಸಿವಿಲ್ ಪ್ರಕರಣಗಳು ಹಾಗೂ 54,226 ಕ್ರಿಮಿನಲ್ ಪ್ರಕರಣಗಳಿವೆ.

ಆ ಪೈಕಿ ರಾಜಿ ಸಂದಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ ಪ್ರಕರಣಗಳನ್ನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದೆ. ಕಳೆದ ಬಾರಿಯಂತೆ ಈ ಬಾರಿಯೂ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಿದ್ದೇವೆ ಎಂದರು.

Key words: Statewide -National Lok Adalat –novomber -18th.