ಪರಿಷತ್ ಫೈಟ್: ಈವರೆಗೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಗೆದ್ಧಿರುವ ಸ್ಥಾನಗಳೆಷ್ಟು ಗೊತ್ತೆ..?

ಬೆಂಗಳೂರು,ಡಿಸೆಂಬರ್,14,2021(www.justkannada.in):  ರಾಜ್ಯ ವಿಧಾನಪರಿಷತ್ನ 25 ಸ್ಥಾನಗಳ  ಚುನಾವಣಾ ಫಲಿತಾಂಶ ಹೊರಬೀಳುತಿದ್ದು ಹೆಚ್ಚು ಸ್ಥಾನಗಳನ್ನ ಗೆದ್ದು ಪರಿಷತ್ ನಲ್ಲಿ ಅಧಿಕಾರಕ್ಕೇರಲು ಕಾಂಗ್ರೆಸ್ ಬಿಜೆಪಿ ಹರಸಾಹಸ ನಡೆಸುತ್ತಿವೆ.

ಈ ಮಧ್ಯೆ ಸದ್ಯದ ಮಾಹಿತಿ ಪ್ರಕಾರ ಬಿಜೆಪಿ 12 , ಕಾಂಗ್ರೆಸ್ 10 ಹಾಗೂ ಜೆಡಿಎಸ್ 1 ಸ್ಥಾನಗಳಲ್ಲಿ ಗೆಲವು ಸಾಧಿಸಿದೆ. ಉಳಿದ ಕ್ಷೇತ್ರಗಳ ಫಲಿತಾಂಶ ಇನ್ನಷ್ಟೇ ಹೊರಬೀಳಲಿದೆ. ಇನ್ನು ಹಾಸನದಲ್ಲಿ  ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಮೊಮ್ಮಗ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಗೆಲುವುಸಾಧಿಸಿದರೇ ಇತ್ತ ಕೊಡಗಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಸಚಿವ ಎ. ಮಂಜು ಪುತ್ರ ಮಂಥರ್ ಗೌಡಗೆ ಸೋಲಾಗಿದೆ.

ಇನ್ನು ಚಿಕ್ಕಮಗಳೂರಿನಲ್ಲಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಕೆ ಪ್ರಾಣೇಶ್ ಕೇವಲ 6 ಮತಗಳ ಅಂತರದಿಂದ ರೋಚಕ ಗೆಲುವು ಸಾಧಿಸಿದ್ದಾರೆ.  ಕಾಂಗ್ರೆಸ್ ಅಭ್ಯರ್ಥಿ ಗಾಯಿತ್ರಿ ಶಾಂತಗೌಡ ಅವರು 6 ಮತಗಳಿಂದ ಸೋಲನುಭವಿಸಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ಎಂ.ಕೆ ಪ್ರಾಣೇಶ್ 2ನೇ ಬಾರಿ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಇನ್ನೊಂದೆಡೆ ದಕ್ಷಣ ಕನ್ನಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಾಲಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಗೆಲುವು ಸಾಧಿಸಿದ್ದಾರೆ.

Key words: council- Fight- BJP- Congress – JDS – seats