ಮಳೆ ಹೆಚ್ಚಾಗುತ್ತಿದ್ದಂತೆ ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳ.

ಮೈಸೂರು,ನವೆಂಬರ್,16,2021(www.justkannada.in):  ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಅಬ್ಬರ  ಮುಂದುವರೆದಿದೆ. ಈ ಮಧ್ಯೆ ಮಳೆ ಹೆಚ್ಚಾಗುತ್ತಿದ್ದಂತೆ ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ.

ಹೌದು, ಕಳೆದ ಒಂದೇ ವಾರದಲ್ಲಿ ಮೈಸೂರಿನಲ್ಲಿ 28 ಡೆಂಗ್ಯೂ ಪ್ರಕರಣಗಳು ದಾಖಲಾಗಿದೆ.  ಮಳೆ ಹೆಚ್ಚಾದ ಹಿನ್ನೆಲೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿದ್ದು, ಈ ಕುರಿತು ಮಾತನಾಡಿರುವ ಡಿಎಚ್.ಒ ಪ್ರಸಾದ್, ಡೆಂಗ್ಯೂ ತಡೆಗೆ ಮುನ್ನೆಚ್ಚರಿಕೆ ಅಗತ್ಯ. ಮಳೆಗಾಲ ಸಂದರ್ಭದಲ್ಲಿ ಪ್ರತಿ ವರ್ಷ ಪ್ರಕರಣಗಳು ವರದಿಯಾಗುತ್ತಿವೆ.

ಕಳೆದ ಒಂದು ವಾರದಿಂದ ಡೆಂಗ್ಯೂ 28 ಪ್ರಕರಣಗಳು ದಾಖಲಾಗಿವೆ. ಆದರೆ ಯಾವುದೇ ಸಮಸ್ಯೆ ಇಲ್ಲ. ಡೆಂಗ್ಯೂ ತಗುಲಿದ ಎಲ್ಲರೂ ಗುಣಮುಖರಾಗುತ್ತಿದ್ದಾರೆ. ಪ್ರತಿ ಹಳ್ಳಿಗಳಲ್ಲೂ ಆರೋಗ್ಯ ಇಲಾಖೆ ತಂಡ ನಿಗಾವಹಿಸಿದೆ. ಸೊಳ್ಳೆಗಳು ಉತ್ಪತ್ತಿಯಾಗುವ ತಾಣಗಳಲ್ಲಿ ಸ್ವಚ್ಚತೆ ಬಗ್ಗೆ ಅರಿವು ಮೂಡಿಸಲಾಗುತ್ತಿದೆ‌ ಎಂದು  ಡಿಎಚ್ಒ ಪ್ರಸಾದ್ ತಿಳಿಸಿದ್ದಾರೆ.

Key words: Dengue- cases -rise –Mysore-district-rain