ಮೈಸೂರು: ಜ್ಯೂವೆಲ್ಲರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ.

ಮೈಸೂರು,ನವೆಂಬರ್,9,2021(www.justkannada.in): ಜ್ಯೂವೆಲ್ಲರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಅಶೋಕ ರಸ್ತೆಯಲ್ಲಿರುವ ಜ್ಯೂವೆಲ್ಲರಿ ಅಂಗಡಿಯಲ್ಲಿ ಈ ಘಟನೆ‌ ನಡೆದಿದೆ. ಇಂದು ಮಧ್ಯಾಹ್ನ ಸುಮಾರು 3:30ರ ವೇಳೆಯಲ್ಲಿ ಟ್ರಾನ್ಸ್ ಫಾರ್ಮರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಕೂಡಲೇ ಸಿಬ್ಬಂದಿಗಳು ಹೊರಗೆ ಬಂದಿದ್ದಾರೆ. ಸದ್ಯ ಅನಾಹುತ ತಪ್ಪಿದ್ದು,  ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಕಾರ್ಯೋನ್ಮುಖರಾಗಿ ಬೆಂಕಿಯನ್ನ ನಂದಿಸಿದ್ದಾರೆ.Hospital fire-4 Corona-Infected-Death

ಅಂಗಡಿಯಲ್ಲಿ ಸಾಕಷ್ಟು ಚಿನ್ನಾಭರಣಗಳಿದ್ದು ಬೆಂಕಿಯಿಂದ ಹಾನಿ ಆಗಿಲ್ಲವೆಂದು ಹೇಳಲಾಗಿದೆ. 20ಕ್ಕೂ ಹೆಚ್ಚು ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದು ಯಾವುದೇ ಅಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಲಷ್ಕರ್ ಠಾಣೆ ಪೊಲೀಸರ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

Key words: Mysore-Accidental fire – jewelery -store.