ಮೈಸೂರು ದಸರಾ ಮುಗಿಯುತ್ತಿದ್ದಂತೆ ವರುಣನ ಸಿಂಚನ…

 

ಮೈಸೂರು,ಅಕ್ಟೋಬರ್,15,2021(www.justkannada.in): ನಾಡಹಬ್ಬ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ತೆರೆಬಿದ್ದಿದ್ದು ಈ ಬೆನ್ನಲ್ಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವರುಣನ ಸಿಂಚನ ಕಂಡು ಬಂದಿತು.

ಕೊರೋನಾ ಹಿನ್ನೆಲೆ ಈ ಬಾರಿ ಸರಳ ಮತ್ತು ಸಾಂಪ್ರದಾಯಿಕವಾಗಿ ದಸರಾ ಆಚರಣೆ ಮಾಡಲಾಗಿದ್ದು ಜಂಬೂ ಸವಾರಿ ಮೆರವಣಿಗೆ ಅರಮನೆ ಅಂಗಳಕ್ಕಷ್ಟೆ ಸೀಮಿತವಾಗಿತ್ತು. ತಾಯಿ ಚಾಮುಂಡೇಶ್ವರಿ ವಿರಾಜಮಾನಳಾಗಿದ್ದ ಚಿನ್ನದ ಅಂಬಾರಿ ಹೊತ್ತ ಕ್ಯಾಪ್ಟನ್ ಅಭಿಮನ್ಯು ಸುಮಾರು 1 ಕಿ.ಮೀ ವರೆಗೆ ಹೆಜ್ಜೆ ಹಾಕಿದನು. ಬಳಿಕ ಕೆಲವೇ ಸಮಯದಲ್ಲಿ ನಾಡಹಬ್ಬ ಮೈಸೂರು ದಸರಾಗೆ ತೆರೆ ಬಿದ್ದಿತು.

ಈ ಮಧ್ಯೆ ಜಂಬೂ ಸವಾರಿ ಮೆರವಣಿಗೆ ಮುಕ್ತಾಯಗೊಂಡ ಬೆನ್ನಲ್ಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಳೆಯ ಅಬ್ಬರ ಜೋರಾಯಿತು. ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ವರುಣ ತಂಪೆರೆದ ದೃಶ್ಯ ಕಂಡು ಬಂದಿತು.

Key words: mysore –dasara-after-rain