ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಪರ ಬ್ಯಾಟ್ ಬೀಸಿದ ಸಚಿವ ಕೆ.ಎಸ್ ಈಶ್ವರಪ್ಪ.

ಶಿವಮೊಗ್ಗ,ಜೂನ್,5,2021(www.justkannada.in): ಮೈಸೂರಿನಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳ ಜಟಾಪಟಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್ ಈಶ್ವರಪ್ಪ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಪರ ಬ್ಯಾಟ್ ಬೀಸಿದ್ದಾರೆ.jk

ಈ ಕುರಿತು ಇಂದು ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ ಸಚಿವ ಕೆ.ಎಸ್ ಈಶ್ವರಪ್ಪ,  ಶಿಲ್ಪಾನಾಗ್ ಒಳ್ಳೆಯ ಅಧಿಕಾರಿ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿದ್ದಾಗ ಉತ್ತಮ ಕೆಲಸ ಮಾಡಿದ್ದರು. ಆದರೆ ಡಿಸಿ ರೋಹಿಣಿ ಸಿಂಧೂರಿ ಅವರ ಬಗ್ಗೆ ನನಗೆ ಗೊತ್ತಿಲ್ಲ. ಪಕ್ಷಾತೀತವಾಗಿ ಅವರ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದರು.

ಇನ್ನು ಅಧಿಕಾರಿಗಳು ಬಹಿರಂಗವಾಗಿ ಸುದ್ದಿಗೋಷ್ಠಿ ನಡೆಸಿದ್ದು ತಪ್ಪು.  ಸಿಎಂ ಸಮಸ್ಯೆ ಬಗೆಹರಿಸಲಿದ್ದಾರೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.

ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಕೆ.ಎಸ್ ಈಶ್ವರಪ್ಪ, ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆ ಇಲ್ಲ. ನಾಯಕತ್ವ ಬದಲಾವಣೆ ಬಗ್ಗೆ ಹೇಳಿಕೆ ನೀಡಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೂಚನೆ ನೀಡಿದ್ದಾರೆ. ಇನ್ನು ಸಂಪುಟ ವಿಸ್ತರಣೆ, ಪುನರಚನೆ ಸಿಎಂ ಪರಮಾಧಿಕಾರ. ಈ ಬಗ್ಗೆ ಕೇಂದ್ರದ ನಾಯಕರು. ಸಿಎಂ ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.

Key words: minister- KS Eshwarappa- batting – corporation Commissioner -Shilpanag.