ಬೆಂಗಳೂರು,ಅಕ್ಟೋಬರ್,27,2023(www.justkannada.in): ರಾಮನಗರ ಹೆಸರು ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಮಾಜಿ ಸಚಿವ ಅಶ್ವಥ್ ನಾರಾಯಣ್ ವಾಗ್ದಾಳಿ ನಡೆಸಿದ್ದಾರೆ.
ಹೆಸರು ಬದಲಾವಣೆಯ ವೀರ ಅಂದರೆ ಅದು ಡಿ.ಕೆ.ಶಿವಕುಮಾರ್ ಎಂದು ಎಂದು ಶಾಸಕ ಅಶ್ವತ್ಥ್ ನಾರಾಯಣ್ ಕಿಡಿಕಾರಿದ್ದಾರೆ. ರಾಮನಗರ ಉಸ್ತುವಾರಿ ಸಚಿವರಾಗದೆ ಬೆಂಗಳೂರಿಗೆ ಬಂದಿದ್ದೀರಿ. ಜನರಿಗೆ ಒಳ್ಳೆಯದು ಮಾಡಲ್ಲ, ಆದ್ರೆ ಕೆಟ್ಟದ್ದನ್ನಂತೂ ಮಾಡಬೇಡಿ. ಮಂತ್ರಿ ಆಗಿ ಎಷ್ಟು ಕೆಡಿಪಿ ಸಭೆಗಳನ್ನು ಮಾಡಿದ್ದೀರಿ ಎಂದು ಪ್ರಶ್ನಿಸಿದರು.
4 ಬಾರಿ ಸಾತನೂರು, 4 ಬಾರಿ ಕನಕಪುರ ಕ್ಷೇತ್ರ ಪ್ರತಿನಿಧಿಸಿದ್ದೀರಿ. ಇಷ್ಟಾದರೂ ನಿಮ್ಮ ಕ್ಷೇತ್ರ ಅಭಿವೃದ್ಧಿ ಆಗಿಲ್ಲ. ಡಿ.ಕೆ.ಶಿವಕುಮಾರ್ ಗೆ ಇಷ್ಟು ವರ್ಷವಿಲ್ಲದ ಪರಿಜ್ಞಾನ ಈಗ ಬಂತಾ? ಎಂದು ಅಶ್ವತ್ಥ್ ನಾರಾಯಣ್ ಹರಿಹಾಯ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ಕುಮಾರಸ್ವಾಮಿ ಸತ್ಯಾಗ್ರಹಕ್ಕೆ ನಮ್ಮ ಬೆಂಬಲ ಇದೆ ಎಂದು ಅಶ್ವಥ್ ನಾರಾಯಣ್ ತಿಳಿಸಿದರು.
Key words: Ramanagara -name –change- issue-Aswath Narayan – DCM DK Shivakumar.