ಸೇನಾ ಹೆಲಿಕಾಪ್ಟರ್ ದುರಂತ: ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆ.

ಊಟಿ,ಡಿಸೆಂಬರ್,8,2021(www.justkannada.in): ತಮಿಳುನಾಡಿನ ಊಟಿಯ ಕೂನೂರು ಬಳಿ ಸಂಭವಿಸಿದ IAF Mi-12V5 ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನ ಊಟಿಯ ಕೂನೂರು ಬಳಿ ಮಧ್ಯಾಹ್ನ ಪತನವಾಗಿತ್ತು.  ಸೇನೆಯ ಹಿರಿಯ ಅಧಿಕಾರಿಗಳು ಸೇರಿ ಒಟ್ಟು  14 ಮಂದಿ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದರು. ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (CDS) ಬಿಪಿನ್​ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್​ ಕೂಡ ಇದ್ದರು. 14 ಮಂದಿ ಪೈಕಿ 13 ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.  ಸಿಡಿಎಸ್​ ಬಿಪಿನ್​ ರಾವತ್, ಅವರ ಪತ್ನಿ ಮಧುಲಿಕಾ ರಾವತ್​ ಅವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.  ಗುರುತು ಪತ್ತೆಗಾಗಿ ವೈದ್ಯರು ಡಿಎನ್ ಎ ಪರೀಕ್ಷೆ  ನಡೆಸುತ್ತಿದ್ದಾರೆ.

ಇನ್ನು  ಬಿಪಿನ್ ರಾವತ್ ಅವರ ಸ್ಥಿತಿ ಚಿಂತಾಜನಕವಾಗಿದ್ದು ಅವರನ್ನ ವೆಲ್ಲಿಂಗ್ಟನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ  ಎಂಬ ಮಾಹಿತಿ ಲಭ್ಯವಾಗಿದೆ.

Key words: Military –helicopter- disaster-Death -rises  13