1.1 ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆ ಖರೀದಿಗೆ ಕೇಂದ್ರ ಸರ್ಕಾರ ಒಪ್ಪಂದಕ್ಕೆ ಸಹಿ…

kannada t-shirts

ನವದೆಹಲಿ,ಜನವರಿ,11,2021(www.justkannada.in): ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಸಹಯೋಗದಲ್ಲಿ ಅಭಿವೃದ್ಧಿ ಪಡಿಸಲಾಗಿರುವ ಕೋವಿಶೀಲ್ಡ್ ಲಸಿಕೆ ಖರೀದಿಗೆ ಕೇಂದ್ರ ಸರ್ಕಾರ ಒಪ್ಪಂದಕ್ಕೆ ಸಹಿ ಹಾಕಿದೆ.jk-logo-justkannada-mysore

 ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಮತ್ತು ಬ್ರಿಟಿಷ್-ಸ್ವೀಡಿಷ್ ಕಂಪನಿ AstraZeneca ಸಹಯೋಗದಲ್ಲಿ SII ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲಾದ 1.1 ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆ ಖರೀದಿಗೆ ಕೇಂದ್ರ ಸರ್ಕಾರ ಒಪ್ಪಂದಕ್ಕೆ ಸಹಿಹಾಕಿದೆ.  ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿರುವ ಲಸಿಕೆ ಮತ್ತು ಮತ್ತೊಂದು ಭಾರತೀಯ ಸಂಸ್ಥೆ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಲಸಿಕೆಯನ್ನು ತುರ್ತು ಬಳಕೆಗೆ ಜನವರಿ 3ರಂದು ಭಾರತದ ಔಷಧ ನಿಯಂತ್ರಕವು ಅನುಮೋದಿಸಿದೆ. 1.1 crore- Dosage- Coivshield vaccine –purchase-central Government

ಇನ್ನು ಪ್ರತಿ ಡೋಸ್ʼಗೆ ಸುಮಾರು 200 ರೂಪಾಯಿ  ನಿಗದಿ ಮಾಡಲಾಗಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು ಫ್ರಂಟ್ ಲೈನ್ ವಾರಿಯರ್ಸ್ ಗೆ ಲಸಿಕೆ ನೀಡಲಾಗುತ್ತದೆ. ದೇಶದಲ್ಲಿ 3 ಕೋಟಿ ಆರೋಗ್ಯ ಕಾರ್ಯಕರ್ತರಿದ್ದು ಮೊದಲ ಹಂತದಲ್ಲಿ ಉಚಿತವಾಗಿ ಕೊರೋನಾ ಲಸಿಕೆ ನೀಡುವುದಾಗಿ ಕೇಂದ್ರ ಸರಕಾರ ತಿಳಿಸಿದೆ.

Key words: 1.1 crore- Dosage- Coivshield vaccine –purchase-central Government

website developers in mysore