ಎಸ್.ಎಸ್.ಎಲ್.ಸಿ‌ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಪಡೆಯುವ ಶಾಲೆಗಳಿಗೆ 1 ಲಕ್ಷ ರೂ.- ಶಾಸಕ ಎಸ್.ಎ ರಾಮದಾಸ್ ಘೋಷಣೆ.

Promotion

ಮೈಸೂರು,ಜನವರಿ,13,2023(www.justkannada.in): ಈ ಬಾರಿ ಎಸ್.ಎಸ್.ಎಲ್.ಸಿ‌ ಪರೀಕ್ಷೆಯಲ್ಲಿ ಶೇ 100% ಫಲಿತಾಂಶ ಪಡೆಯುವ ಶಾಲೆಗಳಿಗೆ 1 ಲಕ್ಷ ರೂ. ಪ್ರಶಸ್ತಿ ನೀಡಲಾಗುತ್ತದೆ ಎಂದು ಕೆ.ಆರ್ ಕ್ಷೇತ್ರದ ಶಾಸಕ ಎಸ್.ಎ ರಾಮದಾಸ್ ಘೋಷಣೆ ಮಾಡಿದರು.

ಎಸ್.ಎಸ್.ಎಲ್.ಸಿ ಫಲಿತಾಂಶ ವೃಧ್ದಿಗಾಗಿ ದಕ್ಷಿಣ ವಲಯ ವ್ಯಾಪ್ತಿಯ ವನಿತಾ ಸದನ ಪ್ರೌಢಶಾಲಾ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮುಖ್ಯಶಿಕ್ಷಕರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂವಾದ ಸಡೆಸಿದ ಶಾಸಕ ಎಸ್.ರಾಮದಾಸ್   ಈ ಘೋಷಣೆ ಮಾಡಿದ್ದಾರೆ.

“ಈ ಬಾರಿಯ ಎಸ್.ಎಸ್.ಎಲ್.ಸಿ‌ ಪರೀಕ್ಷೆಯಲ್ಲಿ ಶೇ 100% ಫಲಿತಾಂಶ ಪಡೆಯುವ ಶಾಲೆಗಳಿಗೆ 1 ಲಕ್ಷ ರೂ ಪ್ರಶಸ್ತಿ ನೀಡುವುದಾಗಿ ಹೇಳಿದರು. ಹಾಗೂ ಈ ಬಾರಿ ಕ್ಷೇತ್ರ ವ್ಯಾಪ್ತಿಯಲ್ಲಿ ಪರೀಕ್ಷೆಗೆ ಕುಳಿತಿರುವ ಎಲ್ಲಾ 4291 ವಿದ್ಯಾರ್ಥಿಗಳ ಪೋಷಕರಿಗೆ ಪರೀಕ್ಷಾ ದೃಷ್ಠಿಯಿಂದ ಕೈಗೊಳ್ಳಬೇಕಾದ. ಕ್ರಮಗಳ ಬಗ್ಗೆ ಮನವಿ ಪತ್ರವನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಪನಿರ್ದೇಶಕರಾದ ರಾಮಚಂದ್ರರಾಜೇ ಅರಸ್, ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆರ್.ರಾಮಾರಾಧ್ಯ, ವನಿತಾ ಸದನ ಶಿಕ್ಷಣ ಸಂಸ್ಥೆಯ‌ ಅದ್ಯಕ್ಷರಾದ ರವಿ, ಬಿ.ಆರ್.ಸಿ ಶ್ರೀಕಂಠ ಸ್ವಾಮಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶ್ರೀಕಂಠ ಶಾಸ್ತ್ರಿ, ಎಲ್ಲಾ ಮುಖ್ಯಶಿಕ್ಷಕರು , ಅನುಪಾಲನಾಧಿಕಾರಿಗಳು ಭಾಗವಹಿಸಿದ್ದರು.

Key words: 1 lakh rupee- schools -get 100%- result – SSLC- examination-MLA- SA Ramdas.