ಸರ್ಕಾರಿ ಆಸ್ಪತ್ರೆಯಲ್ಲಿ 10 ಮಕ್ಕಳ ಸಜೀವ ದಹನ ಕೇಸ್: ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಸಂತಾಪ…

Promotion

ಮುಂಬೈ,ಜನವರಿ,9,2021(www.justkannada.in):  ಮಹಾರಾಷ್ಟ್ರದ ಭಂಡಾರ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡದಿಂದ 10 ಮಕ್ಕಳ ಸಜೀವದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂತಾಪ ಸೂಚಿಸಿದ್ದಾರೆ.jk-logo-justkannada-mysore

 ಈ ಕುರಿತು ಟ್ವೀಟ್ ಮಾಡಿ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ಮಹಾರಾಷ್ಟ್ರದ ಭಂಡಾರಾದಲ್ಲಿ ಹೃದಯ ಕಲಕುವ ದುರಂತದಲ್ಲಿ ನಾವು ಅಮೂಲ್ಯ ಯುವ ಜೀವಗಳನ್ನು ಕಳೆದುಕೊಂಡಿದ್ದೇವೆ. ಮಕ್ಕಳ ಪೋಷಕರೊಂದಿಗೆ ನಾವಿದ್ದೇವೆ. ಅವರಿಗೆ ದುಃಖ ತಡೆಯುವ ಶಕ್ತಿಯನ್ನು ದೇವರು ನೀಡಲಿ. ಗಾಯಗೊಂಡ ಮಕ್ಕಳು ಮತ್ತು ಸಿಬ್ಬಂದಿಗಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ  ಎಂದಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿ, ಆಸ್ಪತ್ರೆ ಅಗ್ನಿ ದುರಂತದಿಂದಾಗಿ ಆದ ನೋವು ಪದಗಳನ್ನು ಮೀರಿದ್ದು, ಮಕ್ಕಳನ್ನು ಕಳೆದುಕೊಂಡ ಪೋಷಕರಿಗೆ ದೇವರು ನೋವು ತಡೆಯುವ  ಶಕ್ತಿ ನೀಡಲಿ ಎಂದು ಹೇಳಿದ್ದಾರೆ.10 children- burnt- alive - government hospital- Prime Minister -Modi - Amit Shah -condole.

ಮಹಾರಾಷ್ಟ್ರದ ಭಂಡಾರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ  ಅಗ್ನಿ ದುರಂತ ಸಂಭವಿಸಿದ್ದು, ರಾತ್ರಿ 2 ಗಂಟೆ ಸುಮಾರಿಗೆ ನವಜಾತ ಶಿಶುಗಳಿದ್ದ ತೀವ್ರ ನಿಗಾಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ನಿಮಿಷಗಳಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ವಾರ್ಡ್‌ ವ್ಯಾಪಿಸಿದ್ದು, ವಾರ್ಡ್ ನಲ್ಲಿದ್ದ 10 ಮಕ್ಕಳು ಸಾವನ್ನಪ್ಪಿವೆ.

Key words: 10 children- burnt- alive – government hospital- Prime Minister -Modi – Amit Shah -condole.