ಪಂಚರಾಜ್ಯ ಚುನಾವಣೆಗೆ ಕರ್ನಾಟಕ ಕಾಂಗ್ರೆಸ್​ ಗೆ 1000 ಕೋಟಿ ರೂ. ಟಾರ್ಗೆಟ್: ಯಾವ ರಾಜ್ಯಕ್ಕೆ ಎಷ್ಟು? ಟ್ವಿಟ್ಟರ್ ನಲ್ಲಿ ಕುಟುಕಿದ ಬಿಜೆಪಿ.

Promotion

ಬೆಂಗಳೂರು,ಅಕ್ಟೋಬರ್,16,2023(www.justkannada.in): ಪಂಚರಾಜ್ಯ ಚುನಾವಣೆಗಾಗಿ ಕರ್ನಾಟಕ ಕಾಂಗ್ರೆಸ್ ​ಗೆ ಹೈಕಮಾಂಡ್ 1000 ಕೋಟಿ ರೂ. ಟಾರ್ಗೆಟ್ ನೀಡಿದೆ ಎಂದು ಕಾಂಗ್ರೆಸ್ ವಿರುದ್ಧ  ಟ್ವಿಟ್ಟರ್ ನಲ್ಲಿ ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ.   

ಪಂಚರಾಜ್ಯಗಳ ಚುನಾವಣೆಗೆ ‘ಕೈ’​ ಹೈಕಮಾಂಡ್ ಟಾರ್ಗೆಟ್ ನೀಡಿದೆ ಮೊದಲನೇ ಹಂತದ 1000 ಕೋಟಿ ಟಾರ್ಗೆಟ್ ಯಾವ ರಾಜ್ಯಕ್ಕೆ ಎಷ್ಟು? ಎಂದು ಟ್ವೀಟ್ ಮೂಲಕ ಕಾಂಗ್ರೆಸ್​ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ.

✔ ತೆಲಂಗಾಣ ಕಾಂಗ್ರೆಸ್‌ ಗೆ ₹300 ಕೋಟಿ

✔ ಮಿಜೋರಾಂ ಕಾಂಗ್ರೆಸ್‌ ಗೆ ₹100 ಕೋಟಿ

✔ ಛತ್ತಿಸ್‌ಗಢ‌ ಕಾಂಗ್ರೆಸ್‌ ಗೆ ₹200 ಕೋಟಿ

✔ ರಾಜಸ್ಥಾನ‌ ಕಾಂಗ್ರೆಸ್‌ ಗೆ ₹200 ಕೋಟಿ

✔ ಮಧ್ಯಪ್ರದೇಶ‌ ಕಾಂಗ್ರೆಸ್‌ ಗೆ ₹200 ಕೋಟಿ

ಕಮಿಷನ್, ಕಲೆಕ್ಷನ್ ಮೂಲಕ ಸಾವಿರ ಕೋಟಿ ಟಾರ್ಗೆಟ್ ಮಾಡಿ ಸಂಗ್ರಹಿಸುತ್ತಿರುವ ಕಾಂಗ್ರೆಸ್ ಹಣ ಹಂಚುವ ಮುನ್ನವೇ ಸಿಕ್ಕಿ ಬಿದ್ದಿದೆ ಎಂದು ರಾಜ್ಯ ಬಿಜೆಪಿ ಘಟಕ ಟಾಂಗ್ ನೀಡಿದೆ.

Key words: 1000 crores – Karnataka- Congress – elections-Target-BJP

.