ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬಂದ 12 ಚೀತಾಗಳು.

ಭೋಪಾಲ್,ಫೆಬ್ರವರಿ,18,2023(www.justkannada.in): ನಮಿಬಿಯಾ ಬಳಿಕ ಇದೀಗ  ದಕ್ಷಿಣ ಆಫ್ರಿಕಾದಿಂದ 12 ಚೀತಾಗಳನ್ನು ಭಾರತಕ್ಕೆ ಕರೆತರಲಾಗಿದೆ.

ಭಾರತೀಯ ವಾಯುಪಡೆಯ ಸಿ-17 ಗ್ಲೋಬ್ ಮಾಸ್ಟರ್ ಕಾರ್ಗೋ ವಿಮಾದಲ್ಲಿ 12 ಚೀನಾಗಳನ್ನು ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಕರೆತರಲಾಗಿದೆ. 7 ಗಂಡು ಮತ್ತು 5 ಹೆಣ್ಣು ಚೀತಾಗಳನ್ನು ಹೊತ್ತ ವಾಯುಪಡೆಯ ವಿಮಾನವು ಬೆಳಿಗ್ಗೆ 10 ಗಂಟೆ ಸುಮಾರಿಗೆ ಗ್ವಾಲಿಯರ್ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು.

ಮರು ಪರಿಚಯಿಸುವ ಅಂತರ್ ಸರ್ಕಾರಿ ಒಪ್ಪಂದದ ಭಾಗವಾಗಿ 12 ದಕ್ಷಿಣ ಆಫ್ರಿಕಾದ ಚಿರತೆಗಳು ಇಂದು ಮಧ್ಯಪ್ರದೇಶದ ಗ್ವಾಲಿಯರ್‌ಗೆ ಆಗಮಿಸಿವೆ. ಅವುಗಳನ್ನು ಶಿಯೊಪುರ್ ಜಿಲ್ಲೆಯ ಕುನೊ ರಾಷ್ಟ್ರೀಯ ಉದ್ಯಾನಕ್ಕೆ ಅಲ್ಲಿನ ನಿಯಮದಂತೆ ಕ್ವಾರಂಟೈನ್ ಪ್ರದೇಶದಲ್ಲಿ ಬಿಡಲಾಗುತ್ತಿದೆ.

ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ನಮೀಬಿಯಾದಿಂದ 8 ಚೀತಾಗಳನ್ನು ಕರೆತರಲಾಗಿತ್ತು.  ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದಂದು ಈ ಚೀತಾಗಳನ್ನ ಉದ್ಯಾನಕ್ಕೆ ಬಿಡಲಾಗಿತ್ತು.

Key words: 12 cheetahs-came – India –from- South Africa.