1250 ಕೋಟಿ ರೂ ವಿಶೇಷ ಪ್ಯಾಕೇಜ್ ಘೋಷಣೆ: ಲಾಕ್ ಡೌನ್ ಮುಂದುವರಿಕೆ ಬಗ್ಗೆ ಸಿಎಂ ಬಿಎಸ್ ವೈ ಹೇಳಿದ್ದೇನು ಗೊತ್ತೆ..?

ಬೆಂಗಳೂರು,ಮೇ,19,2021(www.justkannada.in): ರಾಜ್ಯದಲ್ಲಿ ಕೊರೋನಾ ಲಾಕ್ ಡೌನ್ ಹಿನ್ನೆಲೆ ಸಂಕಷ್ಟಕ್ಕೆ ಸಿಲುಕಿರುವವರಿಗೆ ನೆರವಿಗೆ ಬಂದಿರುವ ರಾಜ್ಯ ಸರ್ಕಾರ 1250 ಕೋಟಿ ರೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ.jk

ಇಂದು ಹಿರಿಯ ಸಚಿವರ ಜತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಿಷ್ಟು…

ಕೊರೊಣಾ ನಿಯಂತ್ರಣಕ್ಕೆ ಲಾಕ್ ಡೌನ್ ಅನಿವಾರ್ಯವಾಗಿತ್ತು. ಮೇ.24ರವರೆಗೆ ನಿರ್ಬಂಧ ವಿಧಿಸಲಾಗಿತ್ತು. ಲಾಕ್ ಡೌನ್ ವೇಳೆ ಅಗತ್ಯ ಸೇವೆಗೆ ಅವಕಾಶ ಕಲ್ಪಸಿದ್ದವು. ಸಂಕಷ್ಟಕ್ಕೆ ಸಿಲುಕಿರುವವರಿಗೆ ನೆರವಿಗಾಗಿ ಸರ್ಕಾರದಿಂದ 1250 ಕೋಟಿ ರೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದೆ.   ಆಟೋ ಟ್ಯಾಕ್ಸಿ ಕ್ಯಾಬ್ ಚಾಲಕರಿಗೆ 3 ಸಾವಿರ ಪರಿಹಾರ,  ಹೂವು ಬೆಳೆಗಾರರಿಗೆ ಹೆಕ್ಟೇರ್ ಗೆ 10 ಸಾವಿರ ರೂ. ಪರಿಹಾರ ನೀಡಲು ನಿರ್ಧರಿಸಲಾಗಿದೆ. ಇದಕ್ಕೆ 70 ಕೋಟಿ ಖರ್ಚಾಗಲಿದೆ.  ಅಸಂಘಟಿತ ಕಾರ್ಮಿಕರಿಗೆ, ಬೀದಿ ಬದಿ ವ್ಯಾಪಾರಿಗಳಿಗೆ ತಲ 2 ಸಾವಿರ ರೂ ಸಹಾಯ ಧನ,   ಬಿಪಿಎಲ್ ಅಂತ್ಯೋದಯ ಕಾರ್ಡುದಾರರಿಗೆ 5 ಕೆ.ಜಿ ಅಕ್ಕಿ ನೀಡಲು ನಿರ್ಧರಿಸಲಾಗಿದೆ. 1250 crores -special package-announcement-CM BSY

ಬಿಬಿಎಂಪಿ ವ್ಯಾಪ್ತಿ, ನಗರ ಪ್ರದೇಶಗಳಲ್ಲಿ ಇಂದಿರಾ ಕ್ಯಾಂಟಿನ್ ನಲ್ಲಿ ಉಚಿತ ಊಟ ನೀಡಲಾಗುತ್ತದೆ.  ಕೊರೋನಾ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ. ಕೋವಿಡ್ ನಿರ್ವಹಣೆಗೆ ಗ್ರಾಮಪಂಚಾಯಿತಿಗಳಿಗೆ 50 ಸಾವಿರ ರೂ ಮುಂಗಡವಾಗಿ ನೀಡಲಾಗುವುದು. ಇದರಿಂದ 6 ಸಾವಿರ ಗ್ರಾಮ ಪಂಚಾಯಿತಿಗಳಿಗೆ ಅನುಕೂಲವಾಗಲಿದೆ.  3 ದಿನಗಳೊಳಗೆ 2150 ವೈದ್ಯರ ನೇಮಕ ಮಾಡಲಾಗುವುದು

ಇನ್ನು ಲಾಕ್ ಡೌನ್ ಮುಂದುವರೆಸುವ ಬಗ್ಗೆ ಮೇ 23 ರಂದು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

Key words: 1250 crores -special package-announcement-CM BSY