ದೇಶದಲ್ಲಿ ಒಂದೇ ದಿನ ಹೊಸದಾಗಿ 12,516 ಕೋವಿಡ್ ಪ್ರಕರಣಗಳು ಪತ್ತೆ.

Promotion

 

ನವದೆಹಲಿ,ನವೆಂಬರ್,12,2021(www.justkannada.in):   ದೇಶದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಗಳಲ್ಲಿ ಹೊಸದಾಗಿ 12,516 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ.

ಈ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದ್ದು, ಕಳೆದ 24 ತಾಸುಗಳ ಅವಧಿಯಲ್ಲಿ 12,516 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 501 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,44,14,186ಕ್ಕೆ ಏರಿಕೆಯಾಗಿದ್ದು,  ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 4,62,690ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,37,416ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 13,155 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,38,14,080ಕ್ಕೆ ತಲುಪಿದೆ.ಇನ್ನು ಭಾರತದಲ್ಲಿ ಒಂದೇ 11,89,470 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 61,99,02,064 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: 12,516 -new Covid cases -discovered – single day – country.