13ನೇ ಬುಡಕಟ್ಟು ಯುವ ವಿನಿಮಯ ಕಾರ್ಯಕ್ರಮ ಯಶಸ್ವಿ- ಸಚಿವ ನಾರಾಯಣಗೌಡ.

kannada t-shirts

ಬೆಂಗಳೂರು, ಮಾರ್ಚ್,31,2022(www.justkannada.in):  13 ನೇ ಬುಡಕಟ್ಟು ಯುವ ವಿನಿಮಯ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಪಾಲ್ಗೊಂಡಿದ್ದರು.

ಬೆಂಗಳೂರಿನ ಯವನಿಕದಲ್ಲಿ ಕೇಂದ್ರ ಯುವಜನ ವ್ಯವಹಾರ, ಕ್ರೀಡಾ ಸಚಿವಾಲಯ, ಕೇಂದ್ರ ಗೃಹ ಇಲಾಖೆ, ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನೆಹರು ಯುವಕೇಂದ್ರ ವತಿಯಿಂದ ಹಮ್ಮಿಕೊಂಡಿದ್ದ 7 ದಿನಗಳ TRIBAL YOUTH CULTURAL EXCHANGE PROGRAME ಸಮಾರೋಪ ಸಮಾರಂಭ ನಡೆಯಿತು.

ಅವಕಾಶ ವಂಚಿತರಾದ ಬುಡಕಟ್ಟು ಯುವ ಜನರಿಗೆ ಅವಕಾಶ ಒದಗಿಸಿಕೊಟ್ಟು ಬೇರೆ ಬೇರೆ ರಾಜ್ಯಗಳ ಕಲೆ, ಸಂಸ್ಕೃತಿ, ಸಂಪ್ರದಾಯ, ಆಹಾರ ಪದ್ದತಿಗಳ ಬಗ್ಗೆ ವಿನಿಮಯದ ದೃಷ್ಟಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಛತ್ತೀಸ್ ಘಡ, ಜಾರ್ಖಂಡ್, ಆಂಧ್ರ ಪ್ರದೇಶದಿಂದ 220ಕ್ಕೂ ಹೆಚ್ಚು ಬುಡಕಟ್ಟು ಜನಾಂಗದ ವಿದ್ಯಾರ್ಥಿಗಳು ಆಗಮಿಸಿ, ಇದರ ಲಾಭ ಪಡೆದುಕೊಂಡಿದ್ದಾರೆ. ಅಲ್ಲದೇ, ಬೆಂಗಳೂರಿನಲ್ಲಿ ಮೆಟ್ರೋ ಪ್ರಯಾಣ, ವಿಶ್ವೇಶ್ವರಯ್ಯ ಆರ್ಟ್ ಗ್ಯಾಲರಿ, ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂಗೆ ಭೇಟಿ ಕೊಟ್ಟು ವೀಕ್ಷಿಸಿದ್ದಾರೆ. ವಿಧಾನಸೌಧಕ್ಕೆ ಆಗಮಿಸಿ ವಿಧಾನಮಂಡಲ ಅಧಿವೇಶನದ ಎರಡು ಸದನಗಳ ಕಲಾಪಗಳನ್ನು ವೀಕ್ಷಿಸಿದ್ದಾರೆ. ಇದರ ಜೊತೆಗೆ ಯೋಗ, ಸಾಂಸ್ಕೃತಿಕ ಕಾರ್ಯಕ್ರಮಗಳು, ಆಹಾರ ಪದ್ದತಿ, ಉಡುಗೆ ತೊಡುಗೆಗಳ ವಿನಿಮಯ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗುಳ್ಳುವ ಈ ಕಾರ್ಯಕ್ರಮದ ಉದ್ದೇಶವನ್ನು ಯಶಸ್ವಿಗೊಳಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ನಮ್ಮ ಸರ್ಕಾರ ಎಲ್ಲಾ ರೀತಿಯ ಪ್ರೋತ್ಸಾಹ ನೀಡಿದೆ. ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿರೋದು ಖುಷಿ ತಂದಿದೆ. ಇಂತಹ ಕಾರ್ಯಕ್ರಮಗಳು ಹೆಚ್ಚಿನ ಪ್ರಮಾಣದಲ್ಲಿ ನಡೆಯಲಿ ಎಂದು ಹಾರೈಸುತ್ತೇನೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ, ನೆಹರು ಯುವ ಕೇಂದ್ರದ ರಾಜ್ಯ ನಿರ್ದೇಶಕ ನಟರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Key words: 13th Tribal- Youth Exchange -Program –Successful-Minister- Narayana Gowda.

website developers in mysore