ರಾಜ್ಯದಲ್ಲಿ ಇಂದು ಹೊಸದಾಗಿ 1432 ಕೊರೋನಾ ಸೋಂಕು ಪ್ರಕರಣ ಪತ್ತೆ.

Promotion

ಬೆಂಗಳೂರು,ಆಗಸ್ಟ್,19,2021(www.justkannada.in): ರಾಜ್ಯದಲ್ಲಿ ಕೊರೋನಾ 3ನೇ ಅಲೆ ಭೀತಿ ಎದುರಾಗಿದ್ದು, ಈ ಮಧ್ಯೆ ಇಂದು ಹೊಸದಾಗಿ 1432 ಮಂದಿಯಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ.

ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಇಂದು ರಾಜ್ಯದಲ್ಲಿ 1432 ಕೊರೋನಾ ಸೋಂಕು ಪ್ರಕರಣ ಪತ್ತೆಯಾಗಿದೆ. ಒಂದೇ ದಿನ 27 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಪ್ರಸ್ತುತ 29,133 ಸಕ್ರಿಯ ಪ್ರಕರಣಗಳಿದ್ದು ಇಂದು 1538 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ ಎಂದು ತಿಳಿಸಿದೆ.

ಇನ್ನು ಬೆಂಗಳೂರಿನಲ್ಲಿ ಇಂದು 318 ಮಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡರೇ ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.

Key words: 1432 new cases – coronavirus- infection-state