ಇಂದಿನಿಂದ 15ನೇ ಆವೃತ್ತಿಯ ಐಪಿಎಲ್’ಗೆ ವರ್ಣರಂಜಿತ ಚಾಲನೆ

Promotion

ಬೆಂಗಳೂರು, ಮಾರ್ಚ್ 26, 2022 (www.justkannada.in): ಇಂದಿನಿಂದ ಬಹುನಿರೀಕ್ಷಿತ 15ನೇ ಆವೃತ್ತಿಯ ಐಪಿಎಲ್ ಆರಂಭವಾಗಲಿದೆ.

ಈ ಬಾರಿ ಎರಡು ತಂಡಗಳು ಹೊಸದಾಗಿ ಸೇರ್ಪಡೆಯಾಗಿದ್ದು, ಒಟ್ಟು 10 ತಂಡಗಳು ಟ್ರೋಫಿಗಾಗಿ ಕಾದಾಡಲಿವೆ.

ಇಂದು ಐಪಿಎಲ್ ನ ಮೊದಲ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯಲಿದೆ. ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ಇಂದು ಪಂದ್ಯ ನಡೆಯಲಿದೆ.

ಮುಂಬೈನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ಐದು ಬಾರಿ ಚಾಂಪಿಯನ್ ಮುಂಬಾ ಇಂಡಿಯನ್ಸ್ ವಿರುದ್ಧ ಮುಖಾಮುಖಿಯಾಗಲಿದೆ.

ಮೊದಲ ಸೆಟ್ ಪಂದ್ಯಗಳು ಐಪಿಎಲ್ 2016ರ ಚಾಂಪಿಯನ್ ಸನ್ ರೈಸರ್ಸ್ ಹೈದರಾಬಾದ್ ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ರಾಜಸ್ಥಾನ್ ರಾಯಲ್ಸ್ ಗೆ ಆತಿಥ್ಯ ವಹಿಸುವುದರೊಂದಿಗೆ ಕೊನೆಗೊಳ್ಳುತ್ತವೆ.