ಮಲ್ಪೆ ಬಂದರಿನಲ್ಲಿ 17 ಮಂದಿ ಬಾಲಕಾರ್ಮಿಕರ ರಕ್ಷಣೆ…

ಉಡುಪಿ, ಅಕ್ಟೋಬರ್ 29,2020(www.justkannada.in): ಮಕ್ಕಳ ರಕ್ಷಣಾ ಘಟಕ ಮತ್ತು ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಮಲ್ಪೆ ಬಂದರಿನಲ್ಲಿ ಮೀನು ಆಯುವ 17 ಬಾಲ ಕಾರ್ಮಿಕರನ್ನ ರಕ್ಷಣೆ ಮಾಡಿದ್ದಾರೆ.jk-logo-justkannada-logo

17 ಬಾಲ ಕಾರ್ಮಿಕರು ಕೊಪ್ಪಳ ಬಳ್ಳಾರಿ ಮೂಲದವರಾಗಿದ್ದು, ಇವರನ್ನು ಮಲ್ಪೆ ಬಂದರಿನಲ್ಲಿ ಮೀನು ಆಯುವ ಕೆಲಸಕ್ಕೆ ಸೇರಿಸಲಾಗಿತ್ತು. ಈ ನಡುವೆ ಇಂದು ಬೆಳ್ಳಂಬೆಳಿಗ್ಗೆ ಮಕ್ಕಳ ರಕ್ಷಣಾ ಘಟಕ ಹಾಗೂ ಇತರೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 17 ಮಂದಿ ಬಾಲಕಾರ್ಮಿಕರನ್ನು ರಕ್ಷಿಸಿದ್ದಾರೆ. 17 child- labor- protection - Malpe harbor.

ಮಕ್ಕಳ ರಕ್ಷಣಾ ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಾಣಾಧಿಕಾರಿ ಸದಾನಂದ ನಾಯಕ್, ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ರಕ್ಷಾಣಾಧಿಕಾರಿ ಮಹೇಶ್ ದೇವಾಡಿಗ ಸೇರಿ ಇತರೇ ಅಧಿಕಾರಿಗಳು ಭಾಗಿಯಾಗಿದ್ದರು.

Key words: 17 child- labor- protection – Malpe harbor.