ದೇಶದಲ್ಲಿ ಒಂದೇ ದಿನ ಹೊಸದಾಗಿ 18,132 ಕೊರೋನಾ ಪ್ರಕರಣಗಳು ಪತ್ತೆ.

Promotion

ನವದೆಹಲಿ,ಅಕ್ಟೋಬರ್,11,2021(www.justkannada.in):  ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ  ಹೊಸದಾಗಿ 18,132 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ.

ಈ ಕುರಿತು ಮಾಹಿತಿ ನೀಡಿರುವ ಕೇಂಧ್ರ ಆರೋಗ್ಯ ಸಚಿವಾಲಯ, ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ  ಹೊಸದಾಗಿ 18,132 ಪತ್ತೆಯಾಗಿದ್ದು ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,39,71,607ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 193 ಮಂದಿ ಕೊರೋನಾಗೆ  ಮೃತಪಟ್ಟಿದ್ದು, ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 4,50,782ಕ್ಕೆ ಏರಿಕೆಯಾಗಿದೆ ಎಂದು ಮಾಹಿತಿ ನೀಡಿದೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,27,347ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 21,563 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,32,93,478ಕ್ಕೆ ಏರಿಕೆಯಾಗಿದೆ.

Key words:  18,132 corona cases- found-india- single day-