ಇಂಗ್ಲೆಂಡ್ ನೆಲದಲ್ಲಿ 1986ರ ದಾಖಲೆ ಸರಿಗಟ್ಟಿದ ಕೊಯ್ಲಿ ಪಡೆ

Promotion

ಬೆಂಗಳೂರು, ಸೆಪ್ಟೆಂಬರ್ 07, 2021 (www.justkannada.in): ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮಾಜಿ ನಾಯಕ ಕಪಿಲ್ ದೇವ್ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ.

ಹೌದು. ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯ ಗೆದ್ದು ಸರಣಿಯಲ್ಲಿ 2-1 ರಿಂದ ಮುನ್ನಡೆ ಸಾಧಿಸಿದ ಕ್ಯಾಪ್ಟನ್ ಕೊಯ್ಲಿ ಕೆಲವು ದಾಖಲೆಗಳನ್ನು ಮುರಿದಿದ್ದಾರೆ.

1986 ರ ಬಳಿಕ ಇಂಗ್ಲೆಂಡ್ ನಲ್ಲಿ ಒಂದೇ ಸರಣಿಯಲ್ಲಿ ಎರಡು ಟೆಸ್ಟ್ ಪಂದ್ಯಗಳನ್ನು ಗೆಲುವು ಸಾಧಿಸಿದ ಸಾಧನೆಯನ್ನು ಟೀಂ ಇಂಡಿಯಾ ಮಾಡಿದೆ. ಅಂದಹಾಗೆ ಕಪಿಲ್ ದೇವ್ ನಾಯಕತ್ವದಲ್ಲಿ ತಂಡ ಎರಡು ಗೆಲುವು ಸಾಧಿಸಿ ದಾಖಲೆ ಬರೆದಿತ್ತು.

ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಪಾಕಿಸ್ತಾನ, ವೆಸ್ಟ್ ಇಂಡೀಸ್ ಮತ್ತು ದ.ಆಫ್ರಿಕಾ ತಂಡಗಳು ಕೂಡ ಈ ದಾಖಲೆ ಮಾಡಿದೆ.