2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಶಕ್ತಿ ತೋರಿಸುತ್ತೇವೆ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

Promotion

ನವದೆಹಲಿ,ಡಿಸೆಂಬರ್,14,2021(www.justkannada.in):  ರಾಜ್ಯದ ವಿಧಾನಪರಿಷತ್  25 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಕೇವಲ 1 ಸ್ಥಾನದಲ್ಲಿ ಗೆಲುವು ಸಾಧಿಸಿದ್ದು ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ  2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಶಕ್ತಿ ತೋರಿಸುತ್ತೇವೆ ಎಂದಿದ್ದಾರೆ.

ಈ ಕುರಿತು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ,  ಜೆಡಿಎಸ್ ಶಕ್ತಿ ಉಳಿದಿರೋದು ಹೆಚ್.ಡಿಡಿ  ಕುಟುಂಬದಿಂದ. ಪಕ್ಷ ಸಂಘಟನೆಗೆ ಶ್ರಮವಹಿಸುತ್ತೇವೆ. ಜೆಡಿಎಸ್ ಬಗ್ಗೆ ಮಾತಾಡಲು ಬಿಜೆಪಿ ಕಾಂಗ್ರೆಸ್ ಗೆ ನೈತಿಕತೆ ಇಲ್ಲ. ಜೆಡಿಎಸ್ ಮುಗಿಸುವುದು ರಾಷ್ಟ್ರೀಯ ಪಕ್ಷಗಳ ಗುರಿಯಾಗಿದೆ ಎಂದು ಕಿಡಿಕಾರಿದರು.

ಮಂಡ್ಯದಲ್ಲಿ ಬಿಜೆಪಿ ಮತ ಕಾಂಗ್ರೆಸ್ ಗೆ ಹೋಗಿದೆ. ಹೀಗಾಗಿ ಸೋತಿದ್ದೇವೆ.  2023ಕ್ಕೆ ಚುನಾವಣೆಯಲ್ಲಿ ನಮ್ಮ ಶಕ್ತಿ ತೋರುತ್ತೇವೆ. ಜೆಡಿಎಸ್ ವಿರುದ್ಧ ನಿರಂತರ ಅಪಪ್ರಚಾರ ನಡೆಯಿತು. ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದು ಅಪಪ್ರಚಾರ ನಡೆಯಿತು ಎಂದು ಹೆಚ್.ಡಿಕೆ ಅಸಮಾಧಾನ ವ್ಯಕ್ತಪಡಿಸಿದರು.

Key words: We -show -strength – JDS – 2023 Assembly elections- Former CM -HD Kumaraswamy