ರಾಜಕೀಯ ಜೀವನದ ಕೊನೆ ಚುನಾವಣೆ: ಮತ್ತೊಮ್ಮೆ ಪುನರುಚ್ಚರಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

Promotion

ಬೆಂಗಳೂರು, ಮಾರ್ಚ್ 26, 2022 (www.justkannada.in): 2023ರ ಚುನಾವಣೆಯೇ ನನ್ನ ಕೊನೆಯ ಚುನಾವಣೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 2023ರ ವಿಧಾನಸಭೆ ಚುನಾವಣೆ ನನ್ನ ಕೊನೆಯ ಚುನಾವಣೆಯಾದರೂ ಸಕ್ರಿಯ ರಾಜಕಾರಣದಲ್ಲಿರುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನಾನು ಇನ್ನೂ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂದು ನಿರ್ಧರಿಸಿಲ್ಲ. ಚುನಾವಣೆಗೆ ಇನ್ನೂ ಒಂದು ವರ್ಷವಿದೆ. ಈಗಾಗಲೇ ಈ ಬಗ್ಗೆ ತೀರ್ಮಾನ ಮಾಡಲ್ಲ ಎಂದರು.

ವರುಣ, ಚಾಮುಂಡೇಶ್ವರಿ, ಹುಣಸೂರು ಕ್ಷೇತ್ರದಿಂದಲ್ಲೂ ಒತ್ತಡವಿದೆ. ರಾಜಕೀಯ ಪುನರ್ ಜನ್ಮಕೊಟ್ಟ ಚಾಮುಂಡೇಶ್ವರಿ ಕ್ಷೇತ್ರದ ಜನರೇ ನನ್ನನ್ನು ಸೋಲಿಸಿದರು. ಆದರೂ ನಾನು ಅವರನ್ನು ದ್ವೇಷಿಸಿಲಿಲ್ಲ. ಆಗ ಮತ್ತೆ ಅವರೇ ನನ್ನನ್ನು ಸ್ಪರ್ಧಿಸುವಂತೆ ಕರೆಯುತ್ತಿದ್ದಾರೆಂದು ತಿಳಿಸಿದರು.