ಬೆಂಗಳೂರಿನಲ್ಲಿ  ಒಂದೇ ದಿನ ಪಟಾಕಿ ಸಿಡಿದು 26 ಜನರಿಗೆ ಗಾಯ

Promotion

ಬೆಂಗಳೂರು,ನವೆಂಬರ್,13,2023(www.justkannada.in): ನಾಡಿನೆಲ್ಲಡೆ ದೀಪಾವಳಿ ಹಬ್ಬದ ಸಂಭ್ರಮವಾಗಿದ್ದು, ಆದರೆ ಪಟಾಕಿ ಸಿಡಿಸಿ ಗಾಯ ಮಾಡಿಕೊಳ್ಳುವವರ ಸಂಖ್ಯೆ ಹೆ್ಚ್ಚುತ್ತಿದೆ. ಈ ನಡುವೆ  ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ ಪಟಾಕಿ ಸಿಡಿದು26 ಜನರಿಗೆ ಗಾಯಗಳಾಗಿರುವ ಘಟನೆ ನಡೆದಿದೆ.

ನಾಲ್ವರು ಮಕ್ಕಳು ಸೇರಿದಂತೆ 26 ಜನರಿಗೆ ಗಾಯವಾಗಿದ್ದು, ಬೆಂಗಳೂರಿನ ನಾರಾಯಣ ನೇತ್ರಾಲಯದಲ್ಲಿ 22 ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಮಿಂಟೋ ಆಸ್ಪತ್ರೆಯಲ್ಲಿ ನಾಲ್ವರು ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ನಾರಾಯಣ ನೇತ್ರಾಲಯದ 22 ಜನರಲ್ಲಿ 10 ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ನಾರಾಯಣ ನೇತ್ರಾಲಯ ಮುಖ್ಯಸ್ಥ ರೋಹಿತ್ ಶೆಟ್ಟಿ ಮಾಹಿತಿ ನೀಡಿದ್ದಾರೆ.

Key words: 26 people -injured – firecracker -burst – Bangalore