ಪಂಚಮಸಾಲಿಗೆ 2ಡಿ ಮೀಸಲಾತಿ ವಿಚಾರ: ಸಿಎಂ ಬೊಮ್ಮಾಯಿಗೆ 24 ಗಂಟೆಗಳ ಗಡುವು ನೀಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

Promotion

ಬೆಳಗಾವಿ,ಜನವರಿ,5,2023(www.justkannada.in): ಪಂಚಮಸಾಲಿಗೆ 2ಡಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ  ಸಿಎಂ ಬಸವರಾಜ ಬೊಮ್ಮಾಯಿಗೆ  ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ 24 ಗಂಟೆಗಳ ಗಡುವು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ಸಿಎಂ ಬಸವರಾಜ ಬೊಮ್ಮಾಯಿ ಮೀಸಲಾತಿ ಕೊಡುತ್ತಾರೋ ಇಲ್ಲವೋ ಅದನ್ನು ಹೇಳಲಿ. ಬೊಮ್ಮಾಯಿ ಅವರು ತಾಯಿ ಮೇಲೆ ಆಣೆ ಮಾಡಿದ್ದಾರೆ. 24 ತಾಸಿನಲ್ಲಿ ಮೀಸಲಾತಿ ಬಗ್ಗೆ ಹೇಳುತ್ತಾರೆ. ಧಮ್ಮಿ ಹಾಕಿ ಪಂಚಮಸಾಲಿ ಸಮುದಾಯ ಮೀಸಲಾತಿ ಕೇಳುತ್ತಿಲ್ಲ. ಧಮ್ಕಿ ಹಾಕಿದ್ರೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುತ್ತಿದ್ದೆವು.​ ನಿಮ್ಮನ್ನು ಮೂತ್ರ ವಿಸರ್ಜನೆಗೂ ಬಿಡುತ್ತಿರಲಿಲ್ಲ. ಏನೂ ಮಾಡದಿದ್ದರೂ ಧಮ್ಕಿ ಅಂತಾ ಅಪವಾದ ಮಾಡ್ತೀರಾ ಎಂದು ಕಿಡಿಕಾರಿದರು.

ಬಸವರಾಜ ಬೊಮ್ಮಾಯಿ ಸಿಎಂ ಆಗಿದಾಗಿನಿಂದ ನಮ್ಮ ಸಮಾಜದ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ವರದಿ ಕೊಡುವ ಪುಣ್ಯಾತ್ಮ ಮಳೆ ಐತಿ, ಕೊರೊನಾ ಐತಿ ಅಂತಾ ನೆಪ ಹೇಳಿದರು. ಸುಮ್ಮನೆ ಕೊಡಬ್ಯಾಡ ಅಂತಾ ಹೇಳಿರಬೇಕು. ಯಡಿಯೂರಪ್ಪ ಮಾತು ಕೇಳಿ ಎಷ್ಟು ದಿವಸ ನಮಗೆ ಟೋಪಿ ಹಾಕುತ್ತೀರಾ ಎಂದು ಸಿಎಂ ಬೊಮ್ಮಾಯಿಗೆ ಪ್ರಶ್ನೆ ಮಾಡಿದರು.

 

Key words: 2D reservation- issue – Panchmasali- MLA- Basan Gowda Patil Yatnal -CM Bommai