ಇಂದೇ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ- ರಣದೀಪ್ ಸಿಂಗ್ ಸುರ್ಜೇವಾಲ.

Promotion

ನವದೆಹಲಿ,ಏಪ್ರಿಲ್,4,2023(www.justkannada.in):  ರಾಜ್ಯ ವಿಧಾನಸಭಾ ಚುನಾವಣೆಗೆ ಇಂದೇ ಕಾಂಗ್ರೆಸ್ 40 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮಾಹಿತಿ ನೀಡಿದರು.

ಸಿಇಸಿ ಸಭೆ ಬಳಿಕ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ,  ಅಭ್ಯರ್ಥಿಗಳ ಪಟ್ಟಿ ಮೊದಲು ಪ್ರಕಟಿಸಿದ್ದೇ ಕಾಂಗ್ರೆಸ್ . ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆಸಲಾಗಿದೆ. ನೀತಿ ಸಂಹಿತೆ ಜಾರಿಗೂ ಮುನ್ನವೇ 120 ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡಿದ್ದವು. ಆಡಳಿತ ಪಕ್ಷಕ್ಕೂ ಮುನ್ನವೇ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದವು  ಇಂದು 40 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದರು.

ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ನಿಶ್ಚಿತ ಎಂದು ರಣದೀಪ್ ಸಿಂಗ್ ಸುರ್ಜೇವಾಲ ವಿಶ್ವಾಸ ವ್ಯಕ್ತಪಡಿಸಿದರು.

Key words: 2nd list – Congress –candidates- released -today- Randeep Singh Surjewala