ಮಾ.12 ಅಥವಾ 14 ರಂದು ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

Promotion

ಬೆಂಗಳೂರು,ಮಾರ್ಚ್,3,2023(www.justkannada.in): ಮಾರ್ಚ್ 12 ಅಥವಾ 14 ರಂದು ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ,  ಹಾಸನ ಜಿಲ್ಲೆ ರಾಜಕಾರಣ ವಿಚಾರದಲ್ಲಿ ಮಧ್ಯಪ್ರವೇಶಿಸಲ್ಲ ಹಾಸನ ಜಿಲ್ಲೆಯನ್ನ ಹೆಚ್.ಡಿ ರೇವಣ್ಣ ಅವರಿಗೆ ಬಿಟ್ಟಿದ್ದೇನೆ. ಪಕ್ಷಕ್ಕಾಗಿ ದುಡಿದವರನ್ನ ನಾನು ಎಂದೂ ಕೈಬಿಟ್ಟಿಲ್ಲ. ತಾಳ್ಮೆ ಅನ್ನೋದು ಇಲ್ಲಿ ಮುಖ್ಯ ಎಂದರು.

ಪಂಚರತ್ನ ರಥಯಾತ್ರೆ ಬಗ್ಗೆ ಲಗುವಾಗಿ ಮಾನಾಡಿದ್ದಾರೆ. ಜೆಡಿಎಸ್ ರಾಜ್ಯದ ಜನತೆಯ ಭಾವನೆಗೆ ಸ್ಪಂದಿಸುವಂತಹ ಪಕ್ಷ. ಜನತಾ ದಳ ಬಂದಾಗ ಅಭಿವೃದ್ದಿ ಅನ್ನೋದು ಆರಂಭವಾಯಿತು  ಹೆಚ್.ಡಿ ರೇವಣ್ಣ ಪಿಡಬ್ಲ್ಯುಡಿ ಮಂತ್ರಿ ಆಗಿದ್ದಾಗ ರಸ್ತೆಗಳು ಅಭಿವೃದ್ಧಿಯಾದವು. ದೇವೆಗೌಡರು ಅಧಿಕಾರದಲ್ಲಿದ್ದಾಗ ಬಡ್ಡಿಮನ್ನಾ ಮಾಡಿದರು. ನಾನು ಅಧಿಕಾರಕ್ಕೆ ಬಂದಾಗ ರೈತರ ಸಾಲಮನ್ನಾ ಮಾಡಿದೆ ಎಂದರು.

Key words: 2nd list – JDS candidates – release – March 12-Former CM- HD Kumaraswamy.