ಇಂದು ಸಂಜೆ ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ…?

Promotion

ಬೆಂಗಳೂರು,ಏಪ್ರಿಲ್,1,2023(www.justkannada.in):  ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಜೆಡಿಎಸ್ ಈಗಾಗಲೇ ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ಬಿಡುಗಡೆ ಮಾಡಿದ್ದು ಇಂದು ಸಂಜೆ 2ನೇ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಈಗಾಗಲೇ ಜೆಡಿಎಸ್ 93 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು ಇಂದು ಸಂಜೆ ಹಾಸನ ಕ್ಷೇತ್ರವನ್ನ ಬಿಟ್ಟು ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಪತ್ನಿ ಭವಾನಿ ರೇವಣ್ಣರಿಗೆ ಟಿಕೆಟ್ ಕೊಡಿಸಲು ಹೆಚ್.ಡಿ ರೇವಣ್ಣ ಕಸರತ್ತು ನಡೆಸುತ್ತಿದ್ದಾರೆ. ಆದರೆ ಹೆಚ್.ಡಿ ಕುಮಾರಸ್ವಾಮಿ ಹಾಸನ ಕ್ಷೇತ್ರದಿಂದ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡುವ ಇಂಗಿತ ವ್ಯಕ್ತವಾಗಿದ್ದು ಸದ್ಯ ಈ ಕುರಿತು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

Key words: 2nd list -JDS candidates -released -today