ದ್ವಿತೀಯ ಪಿಯು ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: 65,233 ವಿದ್ಯಾರ್ಥಿಗಳು ಉತ್ತೀರ್ಣ.

ಬೆಂಗಳೂರು,ಸೆಪ್ಟಂಬರ್,12,2022(www.justkannada.in): ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು,  ಪೂರಕ ಪರೀಕ್ಷೆಯಲ್ಲಿ 65,233 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಆ.12ರಿಂದ ಆ.25ರವರೆಗೆ ನಡೆದಿದ್ದ ಪೂರಕ ಪರೀಕ್ಷೆ ನಡೆಸಲಾಗಿತ್ತು.  ಪರೀಕ್ಷೆಗೆ ಒಟ್ಟು 1,75,905 ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 65,233 ವಿದ್ಯಾರ್ಥಿಗಳು ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಶೇ.37.08%ದಷ್ಟು ಫಲಿತಾಂಶ ಬಂದಿದೆ. ಫಲಿತಾಂಶ ವೀಕ್ಷಿಸಲು ಅಭ್ಯರ್ಥಿಗಳು karresults.nic.in ನಲ್ಲಿ Karresults ನ ಅಧಿಕೃತ ಸೈಟ್ ಗೆ ಭೇಟಿ ನೀಡಬಹುದು.

Key words: 2nd PU -Supplementary –Exam- Result -Declared.