ನಂದಮೂರಿ ಬಾಲಕೃಷ್ಣಗೆ 2ನೇ ಬಾರಿ ಕೋವಿಡ್ ಸೋಂಕು

Promotion

ಬೆಂಗಳೂರು, ಜೂನ್ 25, 2022 (www.justkannada.in): ಹಿರಿಯ ನಟ ನಂದಮೂರಿ ಬಾಲಕೃಷ್ಣ ಅವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ.

ಯಾವುದೇ ರೋಗಲಕ್ಷಣಗಳಿಲ್ಲೆಎಂದು ಅವರ ಆಪ್ತರು ತಿಳಿಸಿದ್ದಾರೆ. ಅಂದಹಾಗೆ ಅವರಿಗೆ ವೈರಸ್ ತಗುಲಿರುವುದು ಇದು ಎರಡನೇ ಬಾರಿಯಾಗಿದೆ.

ನಟ ನಂದಮೂರಿ ಬಾಲಕೃಷ್ಣ ಅವರ ಪರವಾಗಿ ಹೇಳಿಕೆ ಬಿಡುಗಡೆ ಮಾಡಲಾಗಿದೆ. ನಟ ಪ್ರಸ್ತುತ ಹೋಮ್ ಐಸೋಲೇಶನ್ನಲ್ಲಿದ್ದಾರೆ.

ಕಳೆದ ಎರಡು ದಿನಗಳಿಂದ ಅವರನ್ನು ಭೇಟಿಯಾದ ಪ್ರತಿಯೊಬ್ಬರಿಗೂ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ. ಜತೆಗೆ ತಮ್ಮ ಆರೋಗ್ಯ ಉತ್ತಮವಾಗಿರುವುದರಿಂದ ಯಾರೂ ಆತಂಕ ಪಡಬೇಡಿ ಎಂದು ತಿಳಿಸಿದ್ದಾರೆ.