ಲಂಡನ್’ನಿಂದ ಬೆಂಗಳೂರಿಗೆ ಬಂದಿಳಿದ 326 ಅನಿವಾಸಿ ಭಾರತೀಯರು

ಬೆಂಗಳೂರು, ಮೇ 11, 2020 (www.justkannada.in): ಲಂಡನ್ ನಲ್ಲಿರುವ ಅನಿವಾಸಿ ಭಾರತೀಯರನ್ನು ಹೊತ್ತು ತಂದ ವಿಮಾನವು ಇಂದು ಮುಂಜಾನೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.

ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ, ಲಂಡನ್ ನಿಂದ ರಾಜ್ಯಕ್ಕೆ ಬಂದಿಳಿದ ಮೊದಲ ವಿಮಾನದಲ್ಲಿ ಮೂರು ಮಕ್ಕಳು ಸೇರಿದಂತೆ ಒಟ್ಟು 326 ಪ್ರಯಾಣಿಕರು ಆಗಮಿಸಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ, ಆರೋಗ್ಯ ಇಲಾಖೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದ ವತಿಯಿಂದ ಪ್ರಯಾಣಿಕರ ಕೋವಿಡ್-19 ಆರೋಗ್ಯ ತಪಾಸಣೆಗಾಗಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಗತ್ಯ ಸಕಲ ಸಿದ್ದತೆ ಮಾಡಿಕೊಳ್ಳಲಾಗಿತ್ತು.